2024 ಚುನಾವಣೆ: ದೇಶದ ಹಿತಕ್ಕಾಗಿ ಕಾಂಗ್ರೆಸ್ ನೊಂದಿಗಿನ ಕಹಿ ಮರೆಯಲು ಮಮತಾ ಸಿದ್ಧ- ಪವಾರ್

ದೇಶದ ಹಿತಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯಲು ಸಿದ್ಧರಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. 
ಶರದ್ ಪವಾರ್
ಶರದ್ ಪವಾರ್

ಮುಂಬೈ: ದೇಶದ ಹಿತಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯಲು ಸಿದ್ಧರಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. 

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿಪಕ್ಷಗಳ ಒಕ್ಕೂಟ ರಚನೆಗೆ ಸಹಕರಿಸಲಿದ್ದಾರೆ ಎಂದು ಮುಂಬೈ ನಲ್ಲಿ ಮಾತನಾಡಿರುವ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಸಹ ಬಿಜೆಪಿಯನ್ನು ವಿರೋಧಿಸಲು ಕಾಂಗ್ರೆಸ್ ನೊಂದೊಗೆ ಕೈ ಜೋಡಿಸಲು ಹಿಂದೇಟು ಹಾಕುವುದಿಲ್ಲ ಎಂದು ಪವಾರ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲೂ ಕಾಂಗ್ರೆಸ್, ಸಿಪಿಐ(ಎಂ) ನ ಮೈತ್ರಿ ಬಿಜೆಪಿಯನ್ನು ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ದೂರ ಮಾಡಿತ್ತು ಎಂಬುದು ಟಿಎಂಸಿ ಅಭಿಪ್ರಾಯವಾಗಿತ್ತು ಎಂದು ಎನ್ ಸಿಪಿ ಮುಖ್ಯಸ್ಥರು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com