ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ಮನೀಶ್ ತಿವಾರಿ ಸ್ಪರ್ಧೆ?

ಸೋನಿಯಾ ಗಾಂಧಿ ನಂತರದ ಉತ್ತರಾಧಿಕಾರಿ ಆಯ್ಕೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿರುವಂತೆಯೇ, ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಕೂಡಾ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಮನೀಶ್ ತಿವಾರಿ
ಮನೀಶ್ ತಿವಾರಿ

ನವದೆಹಲಿ: ಸೋನಿಯಾ ಗಾಂಧಿ ನಂತರದ ಉತ್ತರಾಧಿಕಾರಿ ಆಯ್ಕೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿರುವಂತೆಯೇ, ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಕೂಡಾ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಗಾಗಿ ಗುರುವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 17 ರಂದು ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ಪ್ರಕ್ರಿಯೆ ಬಳಿಕ ಫಲಿತಾಂಶ ಹೊರಬೀಳಲಿದೆ.

ಸೋನಿಯಾ ಗಾಂಧಿ ನಂತರ ಪಕ್ಷದ ಅಧ್ಯಕ್ಷರಾಗಲು ತಿವಾರಿ ಕೂಡಾ ರೇಸ್ ನಲ್ಲಿದ್ದಾರೆ ಎಂಬುದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಪಕ್ಷದಲ್ಲಿ ಸುಧಾರಣೆ ಕೋರಿ ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿದ್ದ ಭಿನ್ನಮತೀಯ ಜಿ-23 ಗುಂಪಿನಲ್ಲಿ ತಿವಾರಿ ಕೂಡಾ ಒಬ್ಬರಾಗಿದ್ದಾರೆ.

ಕುತೂಹಲಕಾರಿ ಸಂಗತಿ ಎಂದರೆ ಗುಲಾಂ ನಬಿ ಆಜಾದ್ ಪಕ್ಷದಿಂದ ನಿರ್ಗಮಿಸಿದ ಬಳಿಕ ಈ ಗುಂಪಿನ ತಿವಾರಿ ಮಾತ್ರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com