'ರಾಹುಲ್ ಗಾಂಧಿ ನನಗೆ ಹೇಳಿದ್ದಾರೆ...': ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಅಶೋಕ್ ಗೆಹ್ಲೋಟ್ ಮಾತು!

ಗಾಂಧಿ ಕುಟುಂಬದ ಯಾರೊಬ್ಬರು ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ಗಾಂಧಿ ಕುಟುಂಬದ ಯಾರೊಬ್ಬರು ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಶುಕ್ರವಾರ ಕೇರಳದಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಕಾಂಗ್ರೆಸ್ ಅಧ್ಯಕ್ಷರಾಗುವ ಎಲ್ಲರ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ನಾನು ರಾಹುಲ್ ಗಾಂಧಿ ಅವರಿಗೆ ಅನೇಕ ಬಾರಿ ಮನವಿ ಮಾಡಿದ್ದೇನೆ. ಗಾಂಧಿ ಕುಟುಂಬದ ಯಾರೂ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಕದನ ತೀವ್ರಗೊಳ್ಳುತ್ತಿರುವಂತೆಯೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಶೀಘ್ರದಲ್ಲೇ ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಗೆಹ್ಲೋಟ್ ತಿಳಿಸಿದ್ದಾರೆ. ದೇಶದ ಸದ್ಯದ ಸ್ಥಿತಿಯನ್ನು ಗಮನಿಸಿದರೆ ಪ್ರತಿಪಕ್ಷಗಳು ಬಲಿಷ್ಠವಾಗಬೇಕಿದೆ ಎಂದರು.

ಅಶೋಕ್ ಗೆಹ್ಲೋಟ್ ಮತ್ತು ಸಂಸದ ಶಶಿ ತರೂರ್ ಅವರು ಮುಂಬರುವ ಚುನಾವಣೆಯ ಸಂಭಾವ್ಯ ಸ್ಪರ್ಧಿಗಳಾಗಿದ್ದಾರೆ. ಆದಾಗ್ಯೂ, ದೇಶಾದ್ಯಂತ ಕಾಂಗ್ರೆಸ್ ಸಮಿತಿಗಳು ಸಭೆಗಳನ್ನು ನಡೆಸುತ್ತಿವೆ, ಅದರಲ್ಲಿ ಒಳಬರುವ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸಿಸಿ ಮತ್ತು ಎಐಸಿಸಿ ಸದಸ್ಯರನ್ನು ನೇಮಿಸಲು ನಾವು ಅಧಿಕಾರ ನೀಡುತ್ತೇವೆ” ಎಂಬ ನಿರ್ಣಯವನ್ನು ಅಂಗೀಕರಿಸಲಾಗಿದೆ.

ರಾಜಸ್ಥಾನದ ಉದಯಪುರದ ಚಿಂತನ್ ಶಿಬಿರದಲ್ಲಿ ತೆಗೆದುಕೊಂಡ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ಎಲ್ಲರೂ ಅನುಸರಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ ಬೆನ್ನಲ್ಲೇ ಬಿಎಸ್ ಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾದ ಸಚಿವರು ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com