ಸಚಿನ್ ಪೈಲಟ್ ರನ್ನು ಸಿಎಂ ಮಾಡುವುದಾದರೆ ವಿರೋಧವಿಲ್ಲ: ರಾಜಸ್ಥಾನ ಸಚಿವ

ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷರ ಹುದ್ದೆಗೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆಯೇ ರಾಜಸ್ಥಾನದ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಗೆಹ್ಲೋಟ್-ಸಚಿನ್ ಪೈಲಟ್
ಗೆಹ್ಲೋಟ್-ಸಚಿನ್ ಪೈಲಟ್

ಜೈಪುರ: ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷರ ಹುದ್ದೆಗೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆಯೇ ರಾಜಸ್ಥಾನದ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ.

ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ನಡುವೆ, ಒಂದು ವೇಳೆ ಈ ರೀತಿಯಾದರೆ ರಾಜಸ್ಥಾನದ ಹೊಸ ಸಿಎಂ ಯಾರಾಗಲಿದ್ದಾರೆ? ಸಚಿನ್ ಪೈಲಟ್ ಆಗಬಹುದೇ? ಎಂಬ ಪ್ರಶ್ನೆಗಳೂ ಮುನ್ನೆಲೆಗೆ ಬಂದಿವೆ. 

ಸಚಿನ್ ಪೈಲಟ್ ಸಿಎಂ ಆಗುವುದರ ಬಗ್ಗೆ ಅಶೋಕ್ ಗೆಹ್ಲೋಟ್ ಸಂಪುಟ ಸದಸ್ಯರ ಪೈಕಿ ಓರ್ವರಾಗಿರುವ. ಗೆಹ್ಲೋಟ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ರಾಜೇಂದ್ರ ಗುಧಾ ಪ್ರತಿಕ್ರಿಯೆ ನೀಡಿದ್ದು, ಬಿಎಸ್ ಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ 6 ಶಾಸಕರು, ಪಕ್ಷದ ಹೈಕಮಾಂಡ್ ಸಚಿನ್ ಪೈಲಟ್ ಆದಿಯಾಗಿ ಯಾರನ್ನೇ ಸಿಎಂ ಮಾಡಿದರೂ ಅವರನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. 

ರಾಜಸ್ಥಾನದ ಉದಯಪುರದ ಚಿಂತನ್ ಶಿಬಿರದಲ್ಲಿ ತೆಗೆದುಕೊಂಡ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ಎಲ್ಲರೂ ಅನುಸರಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ ಬೆನ್ನಲ್ಲೇ ಬಿಎಸ್ ಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾದ ಸಚಿವರು ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ರಾಹುಲ್ ಗಾಂಧಿ ಅವರ ಈ ಹೇಳಿಕೆಯಿಂದ, ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿ ಗೆದ್ದರೆ, ಸಿಎಂ ಸ್ಥಾನದಿಂದ ಕೆಳಗೆ ಇಳಿಯಬೇಕಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com