ಎನ್ ಐಎ ದಾಳಿ ವಿರೋಧಿಸಿ ಪ್ರತಿಭಟನೆ: ಪುಣೆಯಲ್ಲಿ 60 ಜನರ ವಿರುದ್ಧ ದೂರು ದಾಖಲು
ಪುಣೆ: ದೇಶಾದ್ಯಂತ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಇಸ್ಲಾಮಿಕ್ ಸಂಘಟನೆಯ ಮುಖಂಡರು, ಪದಾಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಪುಣೆಯಲ್ಲಿ 60 ಜನರ ನಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಪುಣೆ ಜಿಲ್ಲಾಧಿಕಾರಿ ಕಚೇರಿ ಹೊರಗಡೆ ನಡೆದ ಪ್ರತಿಭಟನೆ ವೇಳೆಯಲ್ಲಿ 41 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಅನುಮತಿ ಪಡೆಯದೆ ರಸ್ತೆ ಬಂದ್ ಮಾಡಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಬಂಧಿಸಲಾದ 41 ಜನರು ಸೇರಿದಂತೆ 60ಕ್ಕೂ ಹೆಚ್ಚಿನ ಜನರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಬುಂದ್ ಗಾರ್ಡನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ಪ್ರತಾಪ್ ಮಾಂಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಕೇರಳ: ಪಿಎಫ್ಐ ಪ್ರತಿಭಟನೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್
ಯಾವುದೇ ಪ್ರತಿಭಟನೆ ನಡೆಸದಂತೆ ಆಯೋಜಕರಿಗೆ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಆದರೆ, ಅವರು ಆದೇಶ ಪಾಲಿಸಿಲ್ಲ. ಐಪಿಸಿ ಸೆಕ್ಷನ್ 141,143,145,147,149 (ಎಲ್ಲವೂ ಕಾನೂನುಬಾಹಿರ ಜಮಾವಣೆಗೆ ಸಂಬಂಧಿಸಿವೆ) 188, 341 ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯಡಿ ಪ್ರತಿಭಟನಾಕಾರರ ವಿರುದ್ಧ ಅಪರಾಧ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೇಶಾದ್ಯಂತ ಉಗ್ರರ ಚಟುವಟಿಕೆಗಳಿಗೆ ಬೆಂಬಲ ನೀಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಏಕಕಾಕಲದಲ್ಲಿ 15 ರಾಜ್ಯಗಳಲ್ಲಿ ಎನ್ ಐಎ ದಾಳಿಸಿ, ಪಿಎಫ್ ಐ ಸಂಘಟನೆಯ 106 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ