ಪುಣೆ: ಪಿಎಫ್ ಐ ಪ್ರತಿಭಟನಾಕಾರರಿಂದ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ವಿಡಿಯೋ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ

ಎನ್ಐಎ ದಾಳಿ ವಿರೋಧಿಸಿ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಇಸ್ಲಾಮಿಕ್ ಸಂಘಟನೆಯ ಸದಸ್ಯರು ಪುಣೆಯಲ್ಲಿ ಶುಕ್ರವಾರ ನಡೆಸಿದ ಪ್ರತಿಭಟನೆ ವೇಳೆ 'ಪಾಕಿಸ್ತಾನ್ ಜಿಂದಾಬಾದ್'  ಘೋಷಣೆ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಿಎಫ್ ಐ ಕಾರ್ಯಕರ್ತರು
ಪಿಎಫ್ ಐ ಕಾರ್ಯಕರ್ತರು

ಪುಣೆ: ಎನ್ಐಎ ದಾಳಿ ವಿರೋಧಿಸಿ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಇಸ್ಲಾಮಿಕ್ ಸಂಘಟನೆಯ ಸದಸ್ಯರು ಪುಣೆಯಲ್ಲಿ ಶುಕ್ರವಾರ ನಡೆಸಿದ ಪ್ರತಿಭಟನೆ ವೇಳೆ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರದ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಈ ವಿಚಾರದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ. ಪುಣೆ ಜಿಲ್ಲಾಧಿಕಾರಿ ಕಚೇರಿ ಪಿಎಫ್ಐ ಪ್ರತಿಭಟನೆ ನಡೆಸಿತ್ತು. ಈ ವೇಳೆಯಲ್ಲಿ 40 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕೂರಿಸಿದಾಗ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಕಾನೂನುಬಾಹಿರವಾಗಿ ಗುಂಪುಗೂಡಿದ ಪಿಎಫ್ ಐ ಸದಸ್ಯರ ವಿರುದ್ಧ ಈಗಾಗಲೇ ಕೇಸ್ ದಾಖಲಾಗಿದ್ದು, ಘೋಷಣೆ ವಿಚಾರದ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಸಾಗರ್ ಪಾಟೀಲ್ ತಿಳಿಸಿದ್ದಾರೆ. ಈ ವಿಚಾರ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ನಿತೀಶ್ ರಾಣೆ, ಪಿಎಫ್ ಐ ಸಂಘಟನೆ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮತ್ತೋರ್ವ ಬಿಜೆಪಿ ಶಾಸಕ ರಾಮ್ ರಾಮ್ ಸತ್ಪೂತ್ ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com