ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ: ಸೆ.30 ಕ್ಕೆ ನಾಮಪತ್ರ ಸಲ್ಲಿಸಲಿರುವ ತರೂರ್

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇರಳ ಸಂಸದ ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 
ಕಾಂಗ್ರೆಸ್ ನಾಯಕ ಶಶಿ ತರೂರ್
ಕಾಂಗ್ರೆಸ್ ನಾಯಕ ಶಶಿ ತರೂರ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇರಳ ಸಂಸದ ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

 ಈ ಮೂಲಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ತರೂರು ಕಣಕ್ಕಿಳಿಯುವುದನ್ನು ಖಚಿತವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ನಾಮಪತ್ರ ಫಾರ್ಮ್ ಪಡೆದ ಶಶಿ ತರೂರ್
 
ಸೆ.30 ರಂದು ಶಶಿ ತರೂರ್ ನಾಮಪತ್ರ ಸಲ್ಲಿಕೆ ಮಾಡಲಿದ್ದು, ರಾಜ್ಯಗಳ ಪ್ರತಿನಿಧಿಗಳನ್ನು ಶೀಘ್ರವೇ ಭೇಟಿ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆಯ 5 ಸೆಟ್ ಪತ್ರಗಳನ್ನು ಶಶಿ ತರೂರ್ ಪಡೆದಿದ್ದು, ಅವರ ಉಮೇದುವಾರಿಕೆಗೆ ಕನಿಷ್ಟ 50 ಮಂದಿ ಪ್ರತಿನಿಧಿಗಳು ಪ್ರತಿಪಾದಕರಾಗಿ ಸಹಿ ಮಾಡಬೇಕಾಗುತ್ತದೆ.  

ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯು ಒಟ್ಟು 10 ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳಿಂದ ಅನುಮೋದನೆ ಪಡೆಯುವ ಅಗತ್ಯವಿದೆ.

ಕಳೆದ ಸೋಮವಾರ ತರೂರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಮೂಲಗಳ ಪ್ರಕಾರ ಚುನಾವಣೆಯಲ್ಲಿ ತಾವು "ತಟಸ್ಥ"ವಾಗಿ ಉಳಿಯುವುದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com