ಉತ್ತರ ಪ್ರದೇಶ: ಬಲವಂತವಾಗಿ ಮದ್ಯ ಕುಡಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ನಾಲ್ವರು

ಬಾರಾಬಂಕಿಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿರುವ ನಾಲ್ವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಾರಾಬಂಕಿ: ಇಲ್ಲಿನ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿರುವ ನಾಲ್ವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸದ್ಯ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಮಹಿಳೆಯನ್ನು ಈ ವಾರದ ಆರಂಭದಲ್ಲಿ ವ್ಯಕ್ತಿಯೊಬ್ಬರು ಕೊಳದ ಬಳಿಗೆ ಮಹಿಳೆಯನ್ನು ಕರೆದೊಯ್ದಿದ್ದರು. ಅಲ್ಲಿ ಇತರ ಮೂವರು ಪುರುಷರು ಸಹ ಇದ್ದರು. ಈ ವೇಳೆ ನಾಲ್ವರು ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ನಂತರ ಅತ್ಯಾಚಾರವೆಸಗಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಪೂರ್ಣೇಂದು ಸಿಂಗ್, 'ಮಹಿಳೆ ತನ್ನ ಪತಿಯೊಂದಿಗೆ ಶನಿವಾರ ಪೊಲೀಸರನ್ನು ಸಂಪರ್ಕಿಸಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಪ್ರಮುಖ ಆರೋಪಿ ದೇವಿ ದೀನ್‌ನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com