ಅಂಕಿತಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು?

ಉತ್ತರಾಖಂಡದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ 19 ವರ್ಷದ ಸ್ವಾಗತಕಾರಿಣಿ ಅಂಕಿತ ಭಂಡಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ದೇಹದ ಮೇಲೆ 4-5 ಗಾಯದ ಗುರುತುಗಳಿವೆ ಎಂದು ವರದಿ ಹೇಳಿದೆ.
ಮೃತ ಅಂಕಿತಾ
ಮೃತ ಅಂಕಿತಾ

ಚಂಡೀಗಢ: ಉತ್ತರಾಖಂಡದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ 19 ವರ್ಷದ ಸ್ವಾಗತಕಾರಿಣಿ ಅಂಕಿತ ಭಂಡಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ದೇಹದ ಮೇಲೆ 4-5 ಗಾಯದ ಗುರುತುಗಳಿವೆ ಎಂದು ವರದಿ ಹೇಳಿದೆ.

ಯುವತಿಯನ್ನು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನಗಳನ್ನು ವಿರೋಧಿಸಿದ ನಂತರ ಹೋಟೆಲ್ ಮಾಲೀಕ, ಬಿಜೆಪಿ ನಾಯಕನ ಮಗ ಪುಲ್ಕಿತ್ ಆರ್ಯ ಮತ್ತು ಇತರ ಇಬ್ಬರು ಸೇರಿ ಹತ್ಯೆ ಮಾಡಿದ್ದಾರೆ. ಆರಂಭದಲ್ಲಿ ಆಕೆ ಕಾಣೆಯಾಗಿದ್ದಳು ಎನ್ನಲಾಗಿತ್ತು. ನಂತರ ಆಕೆಯ ದೇಹವನ್ನು ಸೆಪ್ಟೆಂಬರ್ 24 ರಂದು ಕಾಲುವೆಯಿಂದ ವಶಪಡಿಸಿಕೊಳ್ಳಲಾಯಿತು.

ಬಿಜೆಪಿ ಉಚ್ಛಾಟಿತ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಹಾಗೂ ರೆಸಾರ್ಟ್ ಮಾಲೀಕ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ.ಯುವತಿ ಕೊನೆಯದಾಗಿ ಮೂವರು ಪುರುಷರೊಂದಿಗೆ ಸಿಸಿ ಕ್ಯಾಮೆರಾ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.  ವಿನೋದ್ ಆರ್ಯ ಅವರು ಪುಲ್ಕಿತ್ ಆರ್ಯ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಅವರ ಮಗ ನಿರಪರಾಧಿ ಎಂದು ಹೇಳಿದ್ದಾರೆ.

ಪ್ರಕರಣದ ಬಳಿಕ ಕೋಪಗೊಂಡ ಸ್ಥಳೀಯರು ರೆಸಾರ್ಟ್‌ಗೆ ಬೆಂಕಿ ಹಚ್ಚಿದ್ದರು. ಅದಕ್ಕೂ ಮೊದಲು, ರೆಸಾರ್ಟ್‌ನ ಭಾಗಗಳನ್ನು ಸ್ಥಳೀಯ ಅಧಿಕಾರಿಗಳು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಬುಲ್ಡೋಜರ್‌ಗಳಿಂದ ಉರುಳಿಸಿದ್ದರು. ನಿಧಾನಗತಿಯ ಕ್ರಮಕ್ಕಾಗಿ ಪೊಲೀಸರ ವಿರುದ್ಧ ಭಾರೀ ಪ್ರತಿಭಟನೆಗಳ ನಡುವೆ ಯುವತಿಯನ್ನು ನಿನ್ನೆ ಸಂಜೆ ಅಂತ್ಯಸಂಸ್ಕಾರ ಮಾಡಲಾಯಿತು. ಪ್ರಕರಣದಲ್ಲಿ ಸರ್ಕಾರದ ಕ್ರಮದ ಬಗ್ಗೆಯೂ ಕುಟುಂಬದವರು ಪ್ರಶ್ನೆಗಳನ್ನು ಎತ್ತಿದ್ದರು.

ಆಕೆ ಕೆಲಸ ಮಾಡುತ್ತಿದ್ದ ರೆಸಾರ್ಟ್ ಅನ್ನು ಕೆಡವಿದ್ದನ್ನು ಪ್ರಶ್ನಿಸಿ ಕುಟುಂಬ ಮತ್ತು ಪ್ರತಿಭಟನಾಕಾರರು ಶವವನ್ನು ಅಂತ್ಯಸಂಸ್ಕಾರ ಮಾಡಲು ಆರಂಭದಲ್ಲಿ ನಿರಾಕರಿಸಿದ್ದರು. ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರ ಪ್ರಮುಖ ಆರೋಪಿಯಾಗಿರುವ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com