ಭಾರತ್ ಜೋಡೋ ಯಾತ್ರೆಯನ್ನು ನಿಯಂತ್ರಿಸಲು ಸಲ್ಲಿಕೆಯಾಗಿದ್ದ ಪಿಐಎಲ್ ವಜಾಗೊಳಿಸಿದ ಕೇರಳ ಹೈಕೋರ್ಟ್

ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕೇರಳ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ
ಕೇರಳ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ಕೊಚ್ಚಿ: ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಪಾದಯಾತ್ರೆ ಶಾಂತಿಯುತವಾಗಿ ನಡೆಯುತ್ತಿದ್ದು, ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಸರ್ಕಾರ ಹೇಳಿದ ನಂತರ ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರಿದ್ದ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತು.

ರಾಜ್ಯದ ಹೇಳಿಕೆಗಳನ್ನು ಪರಿಗಣಿಸಿರುವ ನ್ಯಾಯಾಲಯ, ಪಾದಯಾತ್ರೆ ನಡೆಸುತ್ತಿರುವುದು ಟ್ರಾಫಿಕ್ ಜಾಮ್‌ಗೆ ಕಾರಣವಾಗುತ್ತಿದೆ ಎಂಬ ತನ್ನ ಆರೋಪವನ್ನು ಸಾಬೀತುಪಡಿಸಲು ಅರ್ಜಿದಾರ ವಕೀಲರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದೆ.

ಯಾತ್ರೆಯನ್ನು ಶಾಂತಿಯುತವಾಗಿ ನಡೆಸುವಂತೆ ಪೊಲೀಸರು ಯಾತ್ರೆಯ ಸಂಘಟಕರಿಗೆ ಸೂಚಿಸಿದ್ದಾರೆ ಎಂದು ರಾಜ್ಯವು ಪೀಠಕ್ಕೆ ತಿಳಿಸಿದೆ.

ವಕೀಲ ವಿಜಯನ್ ಕೆ ಅವರ ಮನವಿಯಲ್ಲಿ, ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ರಸ್ತೆಯ ಅರ್ಧದಷ್ಟು ಭಾಗವನ್ನು ಮಾತ್ರ ತೆಗೆದುಕೊಳ್ಳಬೇಕು ಮತ್ತು ಉಳಿದ ಭಾಗವನ್ನು ವಾಹನಗಳ ಮುಕ್ತ ಸಂಚಾರಕ್ಕೆ ಬಿಡಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದರು.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಪಾದಯಾತ್ರೆಯನ್ನು ನಿಯಂತ್ರಿಸುವ ಜೊತೆಗೆ ಕಾಶ್ಮೀರವನ್ನು ತಲುಪಲು 150 ದಿನಗಳಲ್ಲಿ 3,570 ಕಿಮೀ ಕ್ರಮಿಸುವ ಉದ್ದೇಶವನ್ನು ಹೊಂದಿದೆ. ಈ ಯಾತ್ರೆಯ ಉದ್ದಕ್ಕೂ ಮಾರ್ಗದಲ್ಲಿ ಬೃಹತ್ ಪೊಲೀಸ್ ಪಡೆಯ ನಿಯೋಜನೆಗೆ ತಗಲುವ ವೆಚ್ಚವನ್ನು ಕಾಂಗ್ರೆಸ್‌ನಿಂದ ವಸೂಲಿ ಮಾಡಲು ನಿರ್ದೇಶನ ನೀಡಬೇಕೆಂದು ಪಿಐಎಲ್ ಕೋರಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶ ಅವರನ್ನೂ ಪಿಐಎಲ್‌ನಲ್ಲಿ ಪಕ್ಷಗಳನ್ನಾಗಿ ಮಾಡಲಾಗಿತ್ತು. ಈ ಮೂವರು ಕಾಂಗ್ರೆಸ್ ನಾಯಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಕಾನೂನು ಮತ್ತು ನ್ಯಾಯಾಲಯ ರೂಪಿಸಿದ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ ಎಂದು ಅದು ಆರೋಪಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com