ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿಗೆ ಸಚಿನ್ ಪೈಲಟ್ ಆಗಮನ
ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.
Published: 27th September 2022 04:54 PM | Last Updated: 27th September 2022 06:50 PM | A+A A-

ಸಚಿನ್ ಪೈಲಟ್
ನವದೆಹಲಿ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.
ರಾಜಸ್ಥಾನದಲ್ಲಿ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನ ಉನ್ನತ ನಾಯಕರು ನಿರಂತರವಾಗಿ ಗಮನಿಸುತ್ತಿರುವಂತೆಯೇ, ಪೈಲಟ್ ನವದೆಹಲಿಗೆ ಆಗಮಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜಿನಾಮೆ?; ಹೈಕಮಾಂಡ್ ಸಂದೇಶ ರವಾನೆಗೆ ಕಮಲ್‌ನಾಥ್ ನೇಮಕ
ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕೆನ್ ಅವರಿಂದ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಕುರಿತ ಲಿಖಿತ ವರದಿಗಾಗಿ ಸೋನಿಯಾ ಗಾಂಧಿ ಕಾಯುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲು ಈ ಇಬ್ಬರು ಮುಖಂಡರನ್ನು ವೀಕ್ಷಕರಾಗಿ ಜೈಪುರಕ್ಕೆ ಕಳುಹಿಸಲಾಗಿತ್ತು. ಆದರೆ, ಗೆಹ್ಲೋಟ್ ಬಣದ 82 ಶಾಸಕರು ಸಭೆಗೆ ಗೈರಾಗಿದ್ದರು. ನಂತರ ವೀಕ್ಷಕರು ಶಾಸಕರ ಮನವೊಲಿಕೆ ವಿಫಲವಾಗಿ ದೆಹಲಿಗೆ ವಾಪಸ್ಸಾಗಿದ್ದರು.