PFI ಗೆ ಮತ್ತೊಂದು ಶಾಕ್: ಸಂಘಟನೆ ನಿಷೇಧ ಬೆನ್ನಲ್ಲೇ ವೆಬ್‌ಸೈಟ್‌, ಸಾಮಾಜಿಕ ಮಾಧ್ಯಮಗಳ ಖಾತೆ ನಿರ್ಬಂಧಕ್ಕೆ ಕೇಂದ್ರ ಆದೇಶ

ದೇಶಾದ್ಯಂತ ಎನ್‌ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಅವುಗಳ ಅಂಗಸಂಸ್ಥೆಗಳ ವೆಬ್‌ಸೈಟ್‌, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಎನ್‌ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಅವುಗಳ ಅಂಗಸಂಸ್ಥೆಗಳ ವೆಬ್‌ಸೈಟ್‌, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳ 'ತೆಗೆದುಹಾಕುವಿಕೆ' ಆದೇಶದ ಭಾಗವಾಗಿ, ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. PFI, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (ಎನ್‌ಸಿಎಚ್‌ಆರ್‌ಒ), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್ (ಕೇರಳ) ಅನ್ನು ಶಾಶ್ವತವಾಗಿ ನಿರ್ಬಂಧಿಸಲಾಗಿದೆ ಮತ್ತು ಅವರು ಪೋಸ್ಟ್ ಮಾಡಿದ ವಿಷಯಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ವರದಿಯನ್ನು ಸಲ್ಲಿಸುವ ಸಮಯದಲ್ಲಿ, PFI, RIF, AIIC ವೆಬ್‌ಸೈಟ್‌ಗಳನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಇನ್ನುಳಿದವು ಕೇಂದ್ರ ಏಜೆನ್ಸಿಗಳ ಉಲ್ಲೇಖದ ಆಧಾರದ ಮೇಲೆ ದೂರಸಂಪರ್ಕ ಇಲಾಖೆಯ ಆದೇಶದ ಮೇರೆಗೆ ಪ್ರಕ್ರಿಯೆಯಲ್ಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ತಮ್ಮ ಖಾತೆಗಳನ್ನು ಅಥವಾ ಈಗ ಭಯೋತ್ಪಾದಕ ಸಂಘಟನೆಯಾಗಿರುವ ಪಿಎಫ್‌ಐಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತೆಗೆದುಹಾಕಲು ಉಲ್ಲೇಖಗಳನ್ನು ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ, ಈ ಬೆಳವಣಿಗೆಯ ಬಗ್ಗೆ ತಿಳಿದಿರುವ ಎರಡನೇ ಅಧಿಕಾರಿಯೊಬ್ಬರು, ಪಿಎಫ್‌ಐ, ಸಿಎಫ್‌ಐ, ಆರ್‌ಐಎಫ್ ಮತ್ತು ಇತರ ಅಂಗಸಂಸ್ಥೆಗಳಿಗೆ ಲಿಂಕ್ ಮಾಡಲಾದ ಅಧಿಕೃತ ವಾಟ್ಸಾಪ್ ಖಾತೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಯಾವುದೇ ದೇಶ ವಿರೋಧಿ ಚಟುವಟಿಕೆ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. PFI ಅಥವಾ ಅದರ ಯಾವುದೇ ಅಂಗಸಂಸ್ಥೆಗಳು ತಮ್ಮ ಚಟುವಟಿಕೆಗಳಿಗಾಗಿ ಯಾವುದೇ ಪ್ರಾಕ್ಸಿ ಸಾಮಾಜಿಕ ಮಾಧ್ಯಮ ಖಾತೆಗಳು ಅಥವಾ ವೆಬ್‌ಸೈಟ್‌ಗಳನ್ನು ತೆರೆದರೆ, ಅವುಗಳನ್ನು ಈಗ ನಿರ್ಬಂಧಿಸಬಹುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com