ಪಿಎಫ್ಐಗೆ ಐದು ವರ್ಷ ನಿಷೇಧ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಟ್ವಿಟರ್ ಖಾತೆಗೆ ಭಾರತ ನಿರ್ಬಂಧ

ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್​ಟಾಗ್ರಾಂ ಹಾಗೂ ಫೇಸ್​ಬುಕ್​ ಹಾಗೂ ಯೂಟ್ಯೂಬ್  ಖಾತೆಗೂ ನಿರ್ಬಂಧ ಹೇರಲಾಗಿದೆ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್​ಟಾಗ್ರಾಂ ಹಾಗೂ ಫೇಸ್​ಬುಕ್​ ಹಾಗೂ ಯೂಟ್ಯೂಬ್  ಖಾತೆಗೂ ನಿರ್ಬಂಧ ಹೇರಲಾಗಿದೆ.

ಕೇಂದ್ರ ಸರ್ಕಾರವು ಬುಧವಾರ ಇಸ್ಲಾಮಿಕ್ ಸಂಘಟನೆ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು “ಕಾನೂನುಬಾಹಿರ” ಎಂದು ಘೋಷಿಸಿ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಭಾರತದಲ್ಲಿ ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ಪಿಎಫ್ ಐ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಹೇಳಿದೆ.

ಕರ್ನಾಟಕ ಮತ್ತು ಕೇರಳ ಸೇರಿದಂತೆ ಸುಮಾರು 15 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎರಡು ಬಾರಿ ದಾಳಿ ನಡೆಸಿ 350 ಪಿಎಫ್ ಐ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಬಿಜೆಪಿ ಆಡಳಿತದ ಉತ್ತರ ಪ್ರದೇಶ, ಕರ್ನಾಟಕ ಮತ್ತು ಗುಜರಾತ್ ಸರ್ಕಾರಗಳು ನಿಷೇಧವನ್ನು ಶಿಫಾರಸು ಮಾಡಿರುವುದಾಗಿ ಗೃಹ ವ್ಯವಹಾರಗಳ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ಪಿಎಫ್ ಐ ಜೊತೆಗೆ, ಅದರ ಅಂಗಸಂಸ್ಥೆಗಳಾದ ರಿಹ್ಯಾಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಇಂಡಿಯಾ, ಕೇರಳವನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ನಿಷೇಧಿಸಲಾಗಿದೆ.

PFI ಹಲವಾರು "ಅಪರಾಧ ಮತ್ತು ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದೆ, ದೇಶದ ಸಾಂವಿಧಾನಿಕ ಅಧಿಕಾರಕ್ಕೆ ಸಂಪೂರ್ಣ ಅಗೌರವ ತೋರಿದೆ, ಹೊರಗಿನಿಂದ ಹಣ ಮತ್ತು ಸೈದ್ಧಾಂತಿಕ ಬೆಂಬಲದೊಂದಿಗೆ ಇದು ದೇಶದ ಆಂತರಿಕ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ" ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com