ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರೇಸ್ ನಲ್ಲಿ ದಿಗ್ವಿಜಯ್ ಸಿಂಗ್, ನಾಳೆ ನಾಮಪತ್ರ ಸಲ್ಲಿಕೆ ಸಾಧ್ಯತೆ
ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕೂಡಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಅಶೋಕ್ ಗೆಹ್ಲೋಟ್ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಂತರ ಹಿಂದೆ ಸರಿಯುವುದು ಬಹುತೇಕ ನಿಶ್ಚಿತವಾಗಿದ್ದು, ಇದೀಗ ದಿಗ್ವಿಜಯ್ ಸಿಂಗ್ ಕೂಡಾ ಈ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
Published: 29th September 2022 01:09 PM | Last Updated: 05th November 2022 03:21 PM | A+A A-

ದಿಗ್ವಿಜಯ್ ಸಿಂಗ್
ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕೂಡಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಅಶೋಕ್ ಗೆಹ್ಲೋಟ್ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಂತರ ಹಿಂದೆ ಸರಿಯುವುದು ಬಹುತೇಕ ನಿಶ್ಚಿತವಾಗಿದ್ದು, ಇದೀಗ ದಿಗ್ವಿಜಯ್ ಸಿಂಗ್ ಕೂಡಾ ಈ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
ಇದನ್ನೂ ಓದಿ: ಅಡಕತ್ತರಿಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್: ಸೋನಿಯಾ ಭೇಟಿಯಲ್ಲೇನಾಗಲಿದೆ?
ರಾಷ್ಟ್ರ ರಾಜಧಾನಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಮಪತ್ರ ಸಂಗ್ರಹಿಸಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು. ಅವರು ನಾಳೆ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಜಿ-23 ಗುಂಪಿನ ಶಶಿ ತರೂರು ನಾಳೆ ನಾಮಪತ್ರ ಸಲ್ಲಿಸುತ್ತಿರುವಂತೆಯೇ, ದಿಗ್ವಿಜಯ್ ಕೂಡಾ ಚುನಾವಣೆಗೆ ಸ್ಪರ್ಧಿಸುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಚುನಾವಣೆಯಲ್ಲಿ ಪ್ರಬಲ ಸ್ಫರ್ಧಿ ಎಂದು ಪರಿಗಣಿಸಲಾಗಿತ್ತು. ಆದರೆ, ರಾಜಸ್ಥಾನದಲ್ಲಿನ ರಾಜಕೀಯ ಬಿಕ್ಕಟ್ಟಿನ ಕಾರಣ ಅವರ ಮೂವರು ಬೆಂಬಲಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಚುನಾವಣೆಯಲ್ಲಿ ಸ್ಫರ್ಧಿಸುವುದು ಅನಿಶ್ಚಿತತೆಯಿಂದ ಕೂಡಿದೆ.