ಪಿಎಫ್‌ಐ ನಿಷೇಧ ಕೇಂದ್ರದ 'ರಾಜಕೀಯ ಸ್ವಾರ್ಥ' ಎಂದ ಮಾಯಾವತಿ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)ಮುಖ್ಯಸ್ಥೆ ಮಾಯಾವತಿ ಅವರು, ಮುಂಬರುವ...
ಮಾಯಾವತಿ
ಮಾಯಾವತಿ

ಲಖನೌ (ಉತ್ತರ ಪ್ರದೇಶ): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)ಮುಖ್ಯಸ್ಥೆ ಮಾಯಾವತಿ ಅವರು, ಮುಂಬರುವ ಹಲವಾರು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದು ಬಿಜೆಪಿಯ ರಾಜಕೀಯ ಸ್ವಾರ್ಥ ಎಂದು ಶುಕ್ರವಾರ ಆರೋಪಿಸಿದ್ದಾರೆ.

"ಪಿಎಫ್‌ಐ ಮತ್ತು ಅದರ ಎಂಟು ಅಂಗಸಂಸ್ಥೆಗಳನ್ನು ದೇಶಾದ್ಯಂತ ನಿಷೇಧಿಸಿರುವುದು ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಇದು ಇತರರನ್ನು ಸಮಾಧಾನಪಡಿಸುವ ಕ್ರಮ. ಆದರೆ ಜನರಲ್ಲಿ ತೃಪ್ತಿಗಿಂತ ಹೆಚ್ಚು ಚಡಪಡಿಕೆ ಇದೆ" ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಈ ಕಾರಣಕ್ಕಾಗಿಯೇ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಈ ಕ್ರಮವನ್ನು ದುರುದ್ದೇಶದ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸುತ್ತಿವೆ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಅನ್ನು ನಿಷೇಧಿಸಬೇಕು ಎಂದು ಬಹಿರಂಗವಾಗಿ ಒತ್ತಾಯಿಸುತ್ತಿವೆ. ಪಿಎಫ್‌ಐಯಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗುವುದರಾದರೆ ಅಂತಹ ಇತರ ಸಂಘಟನೆಗಳನ್ನು ಏಕೆ ನಿಷೇಧಿಸಬಾರದು? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com