ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ; ಸೋಮವಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Published on

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಮಾನನಷ್ಟ ಮೊಕದ್ದಮೆಯಲ್ಲಿ ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ನ್ಯಾಯಾಲಯ, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದಾದ ಬಳಿಕ ರಾಹುಲ್ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ ಪ್ರಕರಣದಲ್ಲಿ ಕಾನೂನು ತಂಡ ಕಾರ್ಯನಿರ್ವಹಿಸುತ್ತಿದೆ ಎಂದು ಗುರುವಾರ ಹೇಳಿದ್ದಾರೆ.

ಈ ವಿಷಯವನ್ನು ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಪಕ್ಷ ಸಿದ್ಧವಿದೆ. ಕೇಂದ್ರ ಸರ್ಕಾರ ರಾಹುಲ್ ಗಾಂಧಿಯನ್ನು ತರಾತುರಿಯಲ್ಲಿ ಅನರ್ಹಗೊಳಿಸಿದೆ. ಈ ಅನರ್ಹತೆಯು 'ಸೇಡು' ಎಂದು ಬಣ್ಣಿಸಿದ್ದಾರೆ.

ರಾಹುಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಮತ್ತು ಅದಾನಿ ಗ್ರೂಪ್ ವಿರುದ್ಧ ಹೊರಿಸಲಾದ ವಂಚನೆಯ ಆರೋಪಗಳ ತನಿಖೆಗೆ ಒತ್ತಾಯಿಸಲು ಕಾಂಗ್ರೆಸ್ ಕೇಂದ್ರದ ವಿರುದ್ಧ ದೇಶದಾದ್ಯಂತ 'ಜೈ ಭಾರತ್ ಸತ್ಯಾಗ್ರಹ'ವನ್ನು ಪ್ರಾರಂಭಿಸಿತು.

X

Advertisement

X
Kannada Prabha
www.kannadaprabha.com