ಉತ್ತರ ಪ್ರದೇಶ: ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಹೇಳಿಕೆ, ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಲಖನೌ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿಯ ಯುವ ಘಟಕದ ನಾಯಕ ಅಕ್ಷಿತ್ ಅಗರ್ವಾಲ್ ನೀಡಿದ ದೂರಿನ ಆಧಾರದ ಮೇಲೆ ಸಂಭಾಲ್ ಕೊತ್ವಾಲಿಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಹೇಳಿದ್ದಾರೆ.

ಸಂಭಾಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಪ್ರಧಾನಿ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಜಿಲ್ಲಾ ಘಟಕದ ಕಚೇರಿ ಉಸ್ತುವಾರಿ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದರು.

ಚೌಧರಿ ಅವರು ಅದಾನಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ, ನೀಡಿರುವ ಅಸಭ್ಯ ಮತ್ತು ಆಕ್ಷೇಪಾರ್ಹ ಹೇಳಿಕೆಗಳ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನಾಯಕ ಹಿಂದೂ ಧರ್ಮದ ವಿರುದ್ಧ ಕೆಲವು ಆಕ್ಷೇಪಾರ್ಹ ಟೀಕೆಗಳನ್ನು ಸಹ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಚೌಧರಿ ಅವರ ಹೇಳಿಕೆಗಳ ವೀಡಿಯೊ ಕ್ಲಿಪ್ ನ್ನು ಸಹ ಪೊಲೀಸರಿಗೆ ಸಲ್ಲಿಸಿದ್ದೇನೆ ಎಂದು ಅಗರ್ವಾಲ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com