ರಾಹುಲ್ ಗಾಂಧಿ ಮೇಲ್ಮನವಿ: ಸೂರತ್‌ಗೆ ಕಾಂಗ್ರೆಸ್ ನಾಯಕರ ದಂಡು, ರಿಜಿಜು ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ತೆರಳುತ್ತಿರುವುದನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.
ಕಿರಣ್ ರಿಜಿಜು, ರಾಹುಲ್ ಗಾಂಧಿ
ಕಿರಣ್ ರಿಜಿಜು, ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ತೆರಳುತ್ತಿರುವುದನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.  ಕಾಂಗ್ರೆಸ್ ನ್ಯಾಯಾಂಗದ ಮೇಲೆ "ಅನಾವಶ್ಯಕ ಒತ್ತಡ" ಹೇರಲು ಪ್ರಯತ್ನಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಆಡಳಿತವಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಇತರ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷದ ನಾಯಕರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಅವರೊಂದಿಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರವೇ ಸೆಷನ್ಸ್ ಕೋರ್ಟ್ ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಗಾಂಧಿ ಪರ ವಕೀಲರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ರಿಜಿಜು, ನನ್ನ ಅಭಿಪ್ರಾಯವು ತುಂಬಾ ಸರಳವಾಗಿದೆ. ಕಾಂಗ್ರೆಸ್ ಪಕ್ಷ  ಏಕೆ ನ್ಯಾಯಾಂಗದ ಮೇಲೆ ಈ ರೀತಿಯ ಅನಗತ್ಯ ಒತ್ತಡ   ಹಾಕಲು ಪ್ರಯತ್ನಿಸುತ್ತಿದೆ. ನ್ಯಾಯಾಂಗದ ವಿಷಯಗಳನ್ನು ಎದುರಿಸಲು ಅನೇಕ ವಿಧಾನ ಮತ್ತು ಮಾರ್ಗಗಳಿವೆ. ಆದರೆ ಇದು ಮಾರ್ಗವೇ? ಎಂದು ವ್ಯಂಗ್ಯವಾಡಿದರು.

ಇಡೀ ಪಕ್ಷವೇ ನ್ಯಾಯಾಲಯಕ್ಕೆ ಘೇರಾವ್ ಮಾಡಲು ಯತ್ನಿಸುತ್ತಿರುವ ಪ್ರಕರಣ ಈ ಹಿಂದೆ ನಡೆದಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಇಡಿ ಕ್ರಮ ತೆಗೆದುಕೊಂಡಾಗ ಇಡಿ ಕಚೇರಿಗೆ ಘೇರಾವ್ ಮಾಡಲು ಬಯಸುತ್ತಾರೆ. ಸಿಬಿಐ ಕ್ರಮ ಕೈಗೊಂಡಾಗ ಸಿಬಿಐಗೆ ಘೇರಾವ್ ಮಾಡಲು ಬಯಸುತ್ತಾರೆ. ನ್ಯಾಯಾಲಯ ತೀರ್ಪು ನೀಡಿದಾಗ ಅವರು ನ್ಯಾಯಾಲಯ ಸಂಕೀರ್ಣಗಳನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುತ್ತಾರೆ. ಈ ರೀತಿಯ ಚಟುವಟಿಕೆಗಳು ಪ್ರಜಾಪ್ರಭುತ್ವವನ್ನು ಕೀಳಾಗಿಸುತ್ತವೆ ಮತ್ತು ಪ್ರತಿಯೊಬ್ಬ ಭಾರತೀಯರು ಇದನ್ನು ಖಂಡಿಸಬೇಕು  ಎಂದು ಸಂಸತ್ ಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com