ಹನುಮ ಜಯಂತಿ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ಗೃಹ ಸಚಿವಾಲಯ ಸೂಚನೆ

ಹನುಮ ಜಯಂತಿಯ ಪೂರ್ವಭಾವಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ವಹಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಬುಧವಾರ ಸೂಚಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ಹನುಮ ಜಯಂತಿಯ ಪೂರ್ವಭಾವಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ವಹಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಬುಧವಾರ ಸೂಚಿಸಿದೆ.

ಕಳೆದ ವಾರ ರಾಮನವಮಿ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಕೋಮುಗಲಭೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಲಹೆ ನೀಡಿದೆ.

'ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಹಬ್ಬವನ್ನು ಶಾಂತಿಯುತವಾಗಿ ಆಚರಿಸುವುದು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಯಾವುದೇ ಅಂಶಗಳನ್ನು ಸೂಕ್ತವಾಗಿ ಮೇಲ್ವಿಚಾರಣೆ ಮಾಡುವಂತೆ ರಾಜ್ಯಗಳಿಗೆ ಪ್ರೋತ್ಸಾಹಿಸಲಾಗುತ್ತದೆ' ಎಂದು ಗೃಹ ಸಚಿವರ ಕಚೇರಿ ಟ್ವೀಟ್ ಮಾಡಿದೆ.

ಈ ವರ್ಷ ಹನುಮ ಜಯಂತಿಯನ್ನು ಏಪ್ರಿಲ್ 6 ರಂದು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com