2 ವಾರಗಳಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ. 400 ರಷ್ಟು ಹೆಚ್ಚಳ, ಆದರೂ ಪರೀಕ್ಷೆ ಹೆಚ್ಚಿಸದ ಸರ್ಕಾರ

ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಕಳೆದ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಶೇ. 400 ರಷ್ಟು ಏರಿಕೆಯಾಗಿದ್ದರೂ ಸರ್ಕಾರ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿಲ್ಲ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಕಳೆದ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಶೇ. 400 ರಷ್ಟು ಏರಿಕೆಯಾಗಿದ್ದರೂ ಸರ್ಕಾರ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿಲ್ಲ. 

ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆಗಳನ್ನು ನೀಡಿದ್ದರೂ ಪರೀಕ್ಷೆ ಹೆಚ್ಚಿಸಿಲ್ಲ. ಇನ್ನೂ ಕೆಲವು ರಾಜ್ಯಗಳು ಪ್ರತಿದಿನ ನಡೆಸಲಾಗುವ ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆಯ ಮಾಹಿತಿಯನ್ನೂ ಸಹ ಸಾರ್ವಜನಿಕವಾಗಿ ಹಂಚಿಕೊಳ್ಳುತ್ತಿಲ್ಲ. 

ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರೂ ಜನರು ಕೋವಿಡ್ -19 ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿಲ್ಲ ಎಂದು ಹೊಸ ಸಮೀಕ್ಷೆಯೊಂದು ದೃಢಪಡಿಸಿದೆ.

ದೇಶದ 303 ಜಿಲ್ಲೆಗಳಲ್ಲಿ 11,000 ಜನರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ. 76 ರಷ್ಟು ಜನ ಕೋವಿಡ್ ರೋಗಲಕ್ಷಣಗಳನ್ನು ಹೊಂದಿದ್ದರೂ ಸಹ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿಲ್ಲ ಎಂಬುದು ತಿಳಿದು ಬಂದಿದೆ.

ಪರೀಕ್ಷೆ ಹೆಚ್ಚಿಸದ ಹಿನ್ನೆಲೆಯಲ್ಲಿ ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಶೇ. 300 ರಷ್ಟು ಕಡಿಮೆ  ವರದಿಯಾಗುತ್ತಿವೆ ಎಂದು ಸಮೀಕ್ಷೆಯು ಎತ್ತಿ ತೋರಿಸಿದೆ.

ಕೋವಿಡ್ ಪರೀಕ್ಷೆಯು ಹೆಚ್ಚು "ನಿಖರವಾದ ಸಾಂಕ್ರಾಮಿಕ ರೋಗದ ಚಿತ್ರಣ" ವನ್ನು ತಿಳಿಯಲು ಮಾತ್ರವಲ್ಲದೆ ಸಮುದಾಯದಲ್ಲಿ ರೋಗವನ್ನು ಹರಡುವ ಲಕ್ಷಣರಹಿತ ರೋಗಿಗೆ ತ್ವರಿತ ಚಿಕಿತ್ಸೆ ಮತ್ತು ಪ್ರತ್ಯೇಕತೆಯನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com