ದೆಹಲಿ ಅಬಕಾರಿ ಹಗರಣ: 3ನೇ ಚಾರ್ಜ್ ಶೀಟ್ ಸಲ್ಲಿಸಿದ ಇಡಿ; ಸಿಸೋಡಿಯಾ, ಕವಿತಾ ಹೆಸರು ಇಲ್ಲ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಮೂರನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲೂ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಬಿಎಸ್ ಆರ್ ನಾಯಕಿ...
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಮೂರನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲೂ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಬಿಎಸ್ ಆರ್ ನಾಯಕಿ ಕವಿತಾ ಅವರನ್ನು ಹೆಸರನ್ನು ಉಲ್ಲೇಖಿಸಿಲ್ಲ.

ಕಿಕ್ ಬ್ಯಾಕ್ ಹಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ‘ಮದ್ಯ ಲಾಬಿ’ಯ ಪರವಾದ ನೀತಿಗಾಗಿ ವಿವಿಧ ಮಧ್ಯವರ್ತಿಗಳಿಂದ ಹಣ ಪಡೆದು ಅದನ್ನು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ವಿಶೇಷವಾಗಿ ಎಎಪಿ ನಾಯಕರಿಗೆ ಲಂಚ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇಂದು ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ಹೆಸರಿಲ್ಲ.

ರೋಸ್ ಅವೆನ್ಯೂ ನ್ಯಾಯಾಲಯದ ಆವರಣದಲ್ಲಿರುವ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರಿಗೆ  ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ, ಗೌತಮ್ ಮಲ್ಹೋತ್ರಾ ಮತ್ತು ರಾಜೇಶ್ ಜೋಶಿ ಅವರನ್ನು ಹೆಸರಿಸಲಾಗಿದೆ.

ಫೆಬ್ರವರಿ 7 ರಂದು ಮಲ್ಹೋಟಾ, ಫೆಬ್ರವರಿ 8 ರಂದು ಜೋಶಿ ಮತ್ತು ಫೆಬ್ರವರಿ 10 ರಂದು ಮಾಗುಂಟಾ ಅವರನ್ನು ಬಂಧಿಸಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. 

ರೋಸ್ ಅವೆನ್ಯೂ ಕೋರ್ಟ್‌ನಲ್ಲಿರುವ ವಿಶೇಷ ನ್ಯಾಯಾಲಯವು ಏಪ್ರಿಲ್ 14 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com