ಕೋಲ್ಕತ್ತಾ: ಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಕೋಲ್ಕತ್ತಾದ ಕೆಲವು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶದಿಂದ ಹಿಡಿದು ಬಂಗಾಳೇತರ ಭದ್ರಕೋಟೆ ಎಂದು ಕರೆಯಲಾಗುವ ಪ್ರದೇಶಕ್ಕೂ ರಾಜ್ಯಪಾಲರು ಭೇಟಿ ನೀಡಿ, ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಸ್ಥಳೀಯರು, ಮಕ್ಕಳು, ರಸ್ತೆ ಬದಿಯ ಅಂಗಡಿಗಳ ಮಾಲೀಕರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ರಾಜ್ಯಪಾಲರು ಮೊದಲು ಲೇಕ್ ಟೌನ್‌ನಲ್ಲಿರುವ ಬಾಲ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು, ನಂತರ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಇಕ್ಬಾಲ್‌ಪೋರ್ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಸಂವಾದ ನಡೆಸಿದರು.
ಈ ವೇಳೆ ಸೌಹಾರ್ದತೆಯ ಸಂದೇಶ ಸಾರಿದ ಬೋಸ್, ''ಈಶ್ವರ ಅಲ್ಲಾ ತೇರೇ ನಾಮ್, ಸಬ್ಕೋ ಸನ್ಮತಿ ದೇ ಭಗವಾನ್ ಎಂದು ಬೋಸ್ ಹೇಳಿದ್ದಾರೆ.
ಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಕೋಮು ವೈಷಮ್ಯ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.
Advertisement