ಚೆನ್ನೈ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು(ಹಂತ-1) ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.
ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸಲು ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಅನನ್ಯವಾಗಿ ವಿನ್ಯಾಸಗೊಳಿಸಲಾಗಿದೆ.
ಸುಮಾರು 2,20,972 ಚ.ಮೀ ವಿಸ್ತೀರ್ಣ ಹೊಂದಿರುವ ಈ ಟರ್ಮಿನಲ್ ಚೆನ್ನೈ ವಿಮಾನ ನಿಲ್ದಾಣದ ಪ್ರಯಾಣಿಕ ದಟ್ಟಣೆ ಮತ್ತು ಏರ್ ಟ್ರಾಫಿಕ್ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಈಗ ನಿರ್ಮಾಣವಾದ ಟಿ-2 ಮೂಲಕ ಚೆನ್ನೈ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ವರ್ಷಕ್ಕೆ 23 ಮಿಲಿಯನ್‌ನಿಂದ 30 ಮಿಲಿಯನ್‌ಗೆ ಹೆಚ್ಚಿಸಬಹುದಾಗಿದೆ.
ಹೊಸ ವಿಮಾನ ನಿಲ್ದಾಣದ ನೆಲ ಮಹಡಿಯಲ್ಲಿ ರಂಗೋಲಿಯಂಥ ವಿನ್ಯಾಸಗಳನ್ನು ನೆಲದ ಮೇಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬಿಡಿಸಲಾಗಿದೆ. ಹೊಸ ಟರ್ಮಿನಲ್ ಸ್ಥಳೀಯ ತಮಿಳು ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಉದಾಹರಣೆಗೆ ಕೋಲಂ, ಸೀರೆ, ದೇವಾಲಯಗಳು ಮತ್ತು ಇತರ ಅಂಶಗಳು ನೈಸರ್ಗಿಕ ಪರಿಸರವನ್ನು ಎತ್ತಿ ತೋರಿಸುತ್ತವೆ" ಎಂದು ಸರ್ಕಾರ ಹೇಳಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ, ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ