ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ತೇಜ್‌ಪುರ್ (ಅಸ್ಸಾಂ): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು.

3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮುರ್ಮು ಅವರು ಏ.6ರಂದು ಅಸ್ಸಾಂಗೆ ಭೇಟಿ ನೀಡಿದ್ದು, ನಿನ್ನೆಯಷ್ಟೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿ ಮಾತನಾಡಿದ್ದರು.

ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com