ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರ ಟೀಕಿಸಿದ ಮತ್ತೊಬ್ಬ ರ‍್ಯಾಪರ್ ವಿರುದ್ಧ ಕೇಸ್ ದಾಖಲು

ತನ್ನ ಹಾಡಿನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಮತ್ತೊಬ್ಬ ರ‍್ಯಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಮುಂಬೈ: ತನ್ನ ಹಾಡಿನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಮತ್ತೊಬ್ಬ ರ‍್ಯಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಇದರೊಂದಿಗೆ ಮಹಾರಾಷ್ಟ್ರ ಪೊಲೀಸರು ಕಳೆದ ಒಂದು ವಾರದಲ್ಲಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಹಾಡು ಹಾಡಿದ ಆರೋಪದ ಮೇಲೆ ಇಬ್ಬರು ರ‍್ಯಾಪರ್ ಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇಂದು ರ‍್ಯಾಪರ್ ಉಮೇಶ್ ಖಾಡೆ ವಿರುದ್ಧ ಮುಂಬೈ ಪೊಲೀಸ್‌ ಅಪರಾಧ ಗುಪ್ತಚರ ಘಟಕದ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಮುಂಬೈನ ವಡಾಲಾ ಪ್ರದೇಶದ ನಿವಾಸಿ ಉಮೇಶ್ ಖಾಡೆ ಅವರ "ಭೋಂಗ್ಲಿ ಕೇಲಿ ಜನತಾ"(ಜನರು ಎದುರಿಸುತ್ತಿರುವ ನೋವುಗಳು) ಹಾಡಿಗಾಗಿ ಶುಕ್ರವಾರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಖಾಡೆ ಅವರು ಶಂಭೋ ಎಂಬ ಖಾತೆಯ ಹೆಸರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಈ ಹಾಡನ್ನು ಅಪ್‌ಲೋಡ್ ಮಾಡಿದ್ದಾರೆ ಮತ್ತು ಹಾಡು ವೈರಲ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಗುರುವಾರ ತನ್ನ ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದ  ಔರಂಗಾಬಾದ್ ಮೂಲದ ರ‍್ಯಾಪರ್ ರಾಜ್ ಮುಂಗಸೆ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com