ರಾಜಸ್ಥಾನ: ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ 

ಸೇನಾ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಿಕಾನೇರ್: ಸೇನಾ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಲಕ್ಷ್ಮಣ್ ಸಿಂಗ್ ರಾವತ್ (43) ಆತ್ಮಹತ್ಯೆ ಮಾಡಿಕೊಂಡ ಯೋಧ. ಸೇನೆಯ ಶಸ್ತ್ರಾಸ್ತ್ರ ಇಲಾಖೆಯಲ್ಲಿ ನಿಯೋಜನೆಗೊಂಡಿದ್ದ ಇವರು, ಇಂದು ಮುಂಜಾನೆ 4 ಗಂಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿದ್ದು, ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ರಾವತ್ ಉತ್ತರಾಖಂಡದ ಪೌರಿ ಗರ್ವಾಲ್ ನಿವಾಸಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com