'ಕೈ' ಎಚ್ಚರಿಕೆ ಹೊರತಾಗಿಯೂ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ!

ರಾಜಸ್ಥಾನ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಪಕ್ಷದ ಎಚ್ಚರಿಕೆ ಹೊರತಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಸಚಿನ್ ಪೈಲಟ್
ಸಚಿನ್ ಪೈಲಟ್
Updated on

ಜೈಪುರ: ರಾಜಸ್ಥಾನ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಪಕ್ಷದ ಎಚ್ಚರಿಕೆ ಹೊರತಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಎಚ್ಚರಿಕೆಯ ನಡುವೆಯೂ ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ. ಮಂಗಳವಾರ ಇಲ್ಲಿಯ ಶಹೀದ್ ಸ್ಮಾರಕದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸುವಂತೆ ಅವರು ಆಗ್ರಹಿಸಿದ್ದಾರೆ.  ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಜನ್ಮದಿನದ ಅಂಗವಾಗಿ ಸಚಿನ್ ಪೈಲಟ್ ಪುಷ್ಪ ನಮನ ಸಲ್ಲಿಸಿ ಉಪವಾಸ ಕುಳಿತರು.

ಶಹೀದ್ ಸ್ಮಾರಕವನ್ನು ತಲುಪುವ ಮೊದಲು, ಕಾಂಗ್ರೆಸ್ ಮುಖಂಡರು ತಮ್ಮ ನಿವಾಸದಿಂದ 22 ಗೋಡೌನ್ ವೃತ್ತಕ್ಕೆ ತೆರಳಿ ಫುಲೆ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com