5,676 ಕೋವಿಡ್ ಸೋಂಕು ಪತ್ತೆ, 21 ಮಂದಿ ಸಾವು; 37 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳು

ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 5,676 ಕೊರೊನಾವೈರಸ್ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 37,093ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 5,676 ಕೊರೊನಾವೈರಸ್ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 37,093ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ದೇಶದಲ್ಲಿ ಚೇತರಿಕೆ ದರ ಶೇ 98.73ರಷ್ಟಿದ್ದು, ಈವರೆಗೆ ಒಟ್ಟು 44,200,079 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೇ ಅವಧಿಯಲ್ಲಿ 21 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈಮೂಲಕ ಇದುವರೆಗೆ 53,10,00 ಮಂದಿ ಮೃತಪಟ್ಟಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ಭಾನುವಾರ ದೇಶದಾದ್ಯಂತ 5,357 ಮಂದಿ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರ 6,155 ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಮಂದಿಗೆ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com