ನವದೆಹಲಿ: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಚಿನ್ ಪೈಲಟ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಂಧವಾ ತಿಳಿಸಿದ್ದಾರೆ
ಸಚಿನ್ ಪೈಲಟ್ ಪ್ರಸ್ತಾಪಿಸಿರುವ ಭ್ರಷ್ಟಾಚಾರದ ವಿಷಯವನ್ನು ನಾನೂ ಒಪ್ಪುತ್ತೇನೆ ಆದರೆ ಅದನ್ನು ಪ್ರಸ್ತಾಪಿಸಿರುವ ರೀತಿ ಸರಿ ಇಲ್ಲ ಎಂದು ಸಚಿನ್ ಪೈಲಟ್ ನಿರಶನದ ಬಗ್ಗೆ ಸುಖ್ಜಿಂದರ್ ಸಿಂಗ್ ಹೇಳಿದ್ದಾರೆ.
ಈ ಹಿಂದೆ ಸಚಿನ್ ಪೈಲಟ್ ನಡೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆ ರೀತಿ ಮಾಡಲಿಲ್ಲ ಈ ಬಾರಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಷ್ಟೇ ಹೇಳಿರುವ ಸುಖ್ಜಿಂದರ್ ಸಿಂಗ್ ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.
ಇದನ್ನೂ ಓದಿ: ಹಿಂದಿನ ಸರ್ಕಾರದ ಅಕ್ರಮಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ; ಇಂದು ದೆಹಲಿಯಲ್ಲಿ ಸಚಿನ್ ಪೈಲಟ್
ಪೈಲಟ್ ನಿರಶನಕ್ಕೆ ಸಂಬಂಧಿಸಿದಂತೆ ಘಟನೆಗಳನ್ನು ಅಧ್ಯಯನ ಮಾಡಿ ವರದಿ ನೀಡುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ರಾಂಧವ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪೈಲಟ್ ಅವರ ನಿರಶನ ಹಾಗೂ ರಾಜಸ್ಥಾನದಲ್ಲಿನ ರಾಜಕೀಯ ಪರಿಸ್ಥಿತಿಯನ್ನು ವಿವರಿಸಿದ್ದರು.
ರಾಜಸ್ಥಾನದ ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದ ಸಚಿನ್ ಪೈಲಟ್ ಕಾಂಗ್ರೆಸ್ ನ ಎಚ್ಚರಿಕೆಗೂ ಜಗ್ಗದೇ ತಮ್ಮದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೈಪುರದಲ್ಲಿ ನಿರಶನ ನಡೆಸಿದ್ದರು.
Advertisement