ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ

ಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪಕ್ಕಿರಿಸಾಮಿ
ಪಕ್ಕಿರಿಸಾಮಿ
Updated on

ಚೆನ್ನೈ: ಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಏತನ್ಮಧ್ಯೆ, ಪಕ್ಷಕ್ಕೆ ಅಪಖ್ಯಾತಿಯ ಜೊತೆಗೆ ಪಕ್ಷದ ತತ್ವಗಳಿಗೆ ವಿರುದ್ಧವಾಗಿ ವರ್ತಿಸಿದ ಆರೋಪದ ಮೇರೆಗೆ ವೃದ್ಧಾಚಲಂ ಪುರಸಭೆಯ ವಾರ್ಡ್ ನಂ 30ರ ಕೌನ್ಸಿಲರ್ ಕೂಡ ಆಗಿರುವ ಪಕ್ಕಿರಿಸಾಮಿ ಅವರನ್ನು ಆಡಳಿತಾರೂಢ ಡಿಎಂಕೆ ಉಚ್ಚಾಟಿಸಿದೆ. ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿಧಾನಸಭೆಯಲ್ಲಿ ಈ ವಿಷಯ ಪ್ರಕಟಿಸಿದರು.

ವೃದ್ಧಾಚಲಂನ ಶಕ್ತಿನಗರದ ಪ್ರಾಥಮಿಕ ಶಾಲೆಯ ಆರು ವರ್ಷದ ವಿದ್ಯಾರ್ಥಿನಿ ಏಪ್ರಿಲ್ 11ರಂದು ಶಾಲೆಯಿಂದ ಹಿಂತಿರುಗಿದ ನಂತರ ಆಕೆ ಹೊಟ್ಟೆ ನೋವು ಎಂದು ಪೋಷಕರಿಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ತಿಳಿಸಿದ್ದು ನಂತರ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವೃದ್ಧಾಚಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ಹೇಳಿದರು.

ಬಾಲಕಿಯ ತಾಯಿ ವೃದ್ಧಾಚಲಂನ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ, ನಿವೃತ್ತ ಶಿಕ್ಷಕ ಪಕ್ಕಿರಿಸಾಮಿಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಮುಂದಿನ ತನಿಖೆಗೆ ಆದೇಶ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಪಕ್ಷಾತೀತವಾಗಿ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯೂ ವಿಚಾರಿಸಿದರು. ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಎಸಗುವವರನ್ನು ಈ ಸರ್ಕಾರ ಇಡೀ ಮಾನವಕುಲಕ್ಕೆ ನಾಚಿಕೆಗೇಡಿ ಎಂದು ಪರಿಗಣಿಸುತ್ತದೆ. ಅಂತಹ ವ್ಯಕ್ತಿಗಳ ವಿರುದ್ಧ ಯಾವುದೇ ಪಕ್ಷಪಾತವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಾನು ಭರವಸೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com