ಮೋದಿ ಉಪನಾಮ ಹೇಳಿಕೆ: ಏಪ್ರಿಲ್ 25ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಪಾಟ್ನಾ ನ್ಯಾಯಾಲಯ ಸಮನ್ಸ್

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಪಾಟ್ನಾ: ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ಮಾರ್ಚ್ 18 ರಂದು ನೀಡಿದ ಆದೇಶದಲ್ಲಿ ಏಪ್ರಿಲ್ 12 ರಂದು ತನ್ನ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು.

ಇದಕ್ಕೆ ನ್ಯಾಯಾಧೀಶರು, ಏಪ್ರಿಲ್ 25ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.

ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಮತ್ತು ಈಗ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.

ಸೂರತ್ ನ್ಯಾಯಾಲಯವು ಇತ್ತೀಚೆಗೆ ಉದ್ದೇಶಿತ ಹೇಳಿಕೆಯ ಮೇಲೆ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಘೋಷಿಸಿತು ಮತ್ತು ನಂತರ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com