ಹಿಂದಿನ ಸರ್ಕಾರದ ಅಕ್ರಮಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ; ಇಂದು ದೆಹಲಿಯಲ್ಲಿ ಸಚಿನ್ ಪೈಲಟ್

ರಾಜಸ್ಥಾನದ ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೈಪುರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬುಧವಾರ ದೆಹಲಿ ತಲುಪಿದ್ದಾರೆ.
ರಾಜಸ್ಥಾನದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಜೈಪುರದ ಶಹೀದ್ ಸ್ಮಾರಕದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಉಪವಾಸ ಕುಳಿತಿದ್ದರು.
ರಾಜಸ್ಥಾನದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಜೈಪುರದ ಶಹೀದ್ ಸ್ಮಾರಕದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಉಪವಾಸ ಕುಳಿತಿದ್ದರು.
Updated on

ನವದೆಹಲಿ: ರಾಜಸ್ಥಾನದ ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೈಪುರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬುಧವಾರ ದೆಹಲಿ ತಲುಪಿದ್ದಾರೆ.

ಅವರು ಪಕ್ಷದ ರಾಜಸ್ಥಾನದ ಎಐಸಿಸಿ ಉಸ್ತುವಾರಿ ಸುಖಜೀಂದರ್ ಸಿಂಗ್ ರಾಂಧವಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿಯಾಗಬಹುದು ಎಂಬ ಊಹಾಪೋಹವಿತ್ತು. ಆದರೆ, ಪೈಲಟ್ ಅವರ ನಿಕಟ ಮೂಲಗಳು ಯಾವುದೇ ಸಭೆಗಳನ್ನು ನಿಗದಿಪಡಿಸಲಾಗಿಲ್ಲ ಎಂದು ತಿಳಿಸಿವೆ.

ಬಿಜೆಪಿ ನಾಯಕಿ ಹಾಗೂ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಮಾಡಲಾಗಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದರ ಪ್ರತಿಭಟನಾರ್ಥವಾಗಿ ಏಪ್ರಿಲ್‌ 11ರಂದು (ಮಂಗಳವಾರ) ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಚಿನ್‌ ಪೈಲಟ್‌ ಭಾನುವಾರ ಘೋಷಿಸಿದ್ದರು.

ಮಂಗಳವಾರ, ಪೈಲಟ್ ಜೈಪುರದಲ್ಲಿ ದಿನವಿಡೀ ಉಪವಾಸ ಕುಳಿತರು. ವಸುಂಧರಾ ರಾಜೆ ನೇತೃತ್ವದಲ್ಲಿ ಬಿಜೆಪಿಯು ಅಧಿಕಾರ ನಡೆಸಿದಾಗ ಭ್ರಷ್ಟಾಚಾರದ ಆರೋಪದ ಪ್ರಕರಣಗಳ ಕುರಿತು ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಕ್ರಮವನ್ನು ಪಕ್ಷ ವಿರೋಧಿ ಎಂದು ಪರಿಗಣಿಸಲಾಗುವುದು ಎಂಬ ಕಾಂಗ್ರೆಸ್ ಕೇಂದ್ರ ನಾಯಕತ್ವದ ಎಚ್ಚರಿಕೆಯನ್ನು ಧಿಕ್ಕರಿಸಿದ ಪೈಲಟ್, ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಉಪವಾಸ ಸತ್ಯಾಗ್ರಹ ನಡೆಸಿದರು.

ಜೈಪುರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಸ್ಥಳದಿಂದ ನಿರ್ಗಮಿಸಿದ ಪೈಲಟ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭ್ರಷ್ಟಾಚಾರ ಮತ್ತು ಆರ್ಥಿಕ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಒಂದಾಗಿವೆ ಮತ್ತು ನನ್ನ ಉಪವಾಸವು ಈ ಚಳುವಳಿಯನ್ನು ವೇಗಗೊಳಿಸುತ್ತದೆ. ಈ ವಿಷಯದ ಬಗ್ಗೆ ಕಳೆದ ವರ್ಷ ಗೆಹ್ಲೋಟ್ ಅವರಿಗೆ ಎರಡು ಪತ್ರಗಳನ್ನು ಬರೆದಿದ್ದೆ. ಆದರೆ, ಯಾವುದೇ ಉತ್ತರ ಸಿಗಲಿಲ್ಲ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ನಾವು ಜನರಿಗೆ ಭರವಸೆ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನಾನು ಬಯಸಿದ್ದೆ. ಆದರೆ, ನಾಲ್ಕು ವರ್ಷಗಳಿಂದ ಇದು ಸಂಭವಿಸಿಲ್ಲ. ಭ್ರಷ್ಟಾಚಾರದ ವಿರುದ್ಧ ಈ ಹೋರಾಟ ಮುಂದುವರಿಯಲಿದೆ ಎಂದು ಪೈಲಟ್ ಹೇಳಿದರು.

2018 ರಲ್ಲಿ ಪಕ್ಷವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಾಗ ಗೆಹ್ಲೋಟ್ ಮತ್ತು ಪೈಲಟ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಗೆ ಉತ್ಸುಕರಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಮೂರನೇ ಬಾರಿಗೆ ಗೆಹ್ಲೋಟ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿತು. 

2020ರ ಜುಲೈನಲ್ಲಿ ಪೈಲಟ್ ಮತ್ತು ಕಾಂಗ್ರೆಸ್ ಶಾಸಕರ ಒಂದು ವಿಭಾಗವು ಗೆಹ್ಲೋಟ್ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಒತ್ತಾಯಿಸಿದರು. ನಂತರ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಯಿತು. ಸಚಿನ್ ಪೈಲಟ್ ಎತ್ತಿದ ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಕಾಂಗ್ರೆಸ್ ಕೇಂದ್ರ ನಾಯಕತ್ವದ ಭರವಸೆಯ ಒಂದು ತಿಂಗಳ ಬಿಕ್ಕಟ್ಟು ಕೊನೆಗೊಂಡಿತು.

ನಂತರ ಅಶೋಕ್ ಗೆಹ್ಲೋಟ್ ಅವರು ಪೈಲಟ್‌ಗೆ 'ಗದ್ದರ್' (ದೇಶದ್ರೋಹಿ), 'ನಕಾರ' (ವೈಫಲ್ಯ) ಮತ್ತು 'ನಿಕಮ್ಮ' (ನಿಷ್ಪ್ರಯೋಜಕ) ಎಂಬ ಪದಗಳನ್ನು ಬಳಸಿದರು ಮತ್ತು ಸಚಿನ್ ಪೈಲಟ್ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಪಿತೂರಿಯಲ್ಲಿ ಬಿಜೆಪಿ ನಾಯಕರೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com