ಭಾರತದಲ್ಲಿ ಕೋವಿಡ್ ಸೋಂಕು ಶೇ.38 ರಷ್ಟು ಏರಿಕೆ; 10-12 ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ

ಭಾರತದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 7,830 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಶೇ.38 ರಷ್ಟು ಹೆಚ್ಚಳ ಕಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಂತರ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ. 
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ

ನವದೆಹಲಿ: ಭಾರತದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 7,830 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಶೇ.38 ರಷ್ಟು ಹೆಚ್ಚಳ ಕಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಂತರ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ. 

24 ಗಂಟೆಗಳಲ್ಲಿ ಕೋವಿಡ್ ನಿಂದ 16 ಮಂದಿ ಸಾವನ್ನಪ್ಪಿದ್ದು ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್ ಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದರೆ, ಗುಜರಾತ್, ಹರ್ಯಾಣ, ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಅತಿ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಕೇರಳದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಏ.11 ರಂದು ದೇಶಾದ್ಯಂತ ಹೊಸದಾಗಿ 5,676 ಕೋವಿಡ್ ಪ್ರಕರಣಗಳು ವರದಿಯಾಗಿತ್ತು. 21 ಮಂದಿ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಕೊರೊನಾವೈರಸ್ ಸೋಂಕು ಪ್ರಕರಣಗಳ ತ್ವರಿತ ಉಲ್ಬಣ: ಹಲವು ರಾಜ್ಯಗಳಲ್ಲಿ ಕೋವಿಡ್ ನಿರ್ಬಂಧ ಜಾರಿ
 
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಮುಂದಿನ 10-12 ದಿನಗಳಲ್ಲಿ ಕೋವಿಡ್ ಸೋಂಕು ಮತ್ತಷ್ಟು ತೀವ್ರವಾಗಿ ಹರಡಲಿದೆ. ಹೆಚ್ಚುತ್ತಿರುವ ಪ್ರಕರಣಗಳನ್ನು ನಿಭಾಯಿಸುವುದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com