ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ 'ನಕಲಿ ಎನ್ಕೌಂಟರ್' ಬಳಸುತ್ತಿದೆ: ಅಖಿಲೇಶ್ ಯಾದವ್ ಕಿಡಿ

ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ 'ನಕಲಿ ಎನ್‌ಕೌಂಟರ್'ಗಳನ್ನು ಬಳಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್

ಲಖನೌ: ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ 'ನಕಲಿ ಎನ್‌ಕೌಂಟರ್'ಗಳನ್ನು ಬಳಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಆರೋಪಿಸಿದ್ದಾರೆ.

ಝಾನ್ಸಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಅಹ್ಮದ್'ನನ್ನು ಉತ್ತರಪ್ರದೇಶದ ಪೊಲೀಸರು ಹತ್ಯೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್ ಅವರು, ನಕಲಿ ಎನ್‌ಕೌಂಟರ್‌ಗಳನ್ನು ನಡೆಸುವ ಮೂಲಕ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ನ್ಯಾಯಾಲಯದ ಮೇಲೆ ನಂಬಿಕೆಯೇ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಕೂಲಂಕುಷವಾಗಿ ತನಿಖೆ ನಡೆಸಬೇಕು. ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು. ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸುವ ಹಕ್ಕು ಸರ್ಕಾರಕ್ಕೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಉತ್ತರಪ್ರದೇಶ ನಾಗರಿಕ ಸಂಸ್ಥೆ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ ಇದ್ದು, ಈ ನಡುವಲ್ಲೇ ಅಸಾಹ್ ಅಹ್ಮದ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com