ಜಾಗರೂಕರಾಗಿರಿ: ಆಂಧ್ರ ಸೇರಿದಂತೆ ಈ ರಾಜ್ಯಗಳಲ್ಲಿ ಬಿಸಿಗಾಳಿ ಬಗ್ಗೆ ಎಚ್ಚರಿಕೆ; ಎಲ್ಲೆಲ್ಲಿ ಇರಲಿದೆ ಉಷ್ಣ ಹವೆ!

ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳ ಬಯಲು ಪ್ರದೇಶಗಳಲ್ಲಿ ಭಾರೀ ಉಷ್ಣ ಹವೆ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ)  ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳ ಬಯಲು ಪ್ರದೇಶಗಳಲ್ಲಿ ಭಾರೀ ಉಷ್ಣ ಹವೆ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ)  ಎಚ್ಚರಿಕೆ ನೀಡಿದೆ. 

ಈ ಹಿಂದೆ ಏಪ್ರಿಲ್ ಆರಂಭದಲ್ಲಿ ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಕೆಲವು ಭಾಗಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಏಪ್ರಿಲ್ ನಿಂದ ಜೂನ್ ವರೆಗೆ ಸಾಮಾನ್ಯ ಗರಿಷ್ಠ ತಾಪಮಾನವನ್ನು ಮುನ್ಸೂಚಿಸಿತ್ತು. ಈ ಅವಧಿಯಲ್ಲಿ ಮಧ್ಯ, ಪೂರ್ವ ಮತ್ತು ವಾಯುವ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚು ಬಿಸಿ ಗಾಳಿ ಪರಿಸ್ಥಿತಿಗಳ ಸಾಧ್ಯತೆಯೂ ಇದೆ.

ಉಷ್ಣ ಹವೆ ಎಲ್ಲಿ ಮತ್ತು ಯಾವಾಗ?
IMD ಪ್ರಕಾರ, ಪಶ್ಚಿಮ ಬಂಗಾಳದ ಬಯಲು ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಏಪ್ರಿಲ್ 17ರವರೆಗೆ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಶನಿವಾರ ಏಪ್ರಿಲ್ 15ರವರೆಗೆ ಮತ್ತು ಬಿಹಾರದಲ್ಲಿ ಶನಿವಾರದಿಂದ ಸೋಮವಾರದವರೆಗೆ (ಏಪ್ರಿಲ್ 15 ರಿಂದ 17) ಉಷ್ಣ ಹವೆ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಮಧ್ಯ ಮತ್ತು ಉತ್ತರ ಪೆನಿನ್ಸುಲರ್ ಭಾರತದಲ್ಲಿ ಪ್ರಸ್ತುತ ಗರಿಷ್ಠ ತಾಪಮಾನವು 40 ರಿಂದ 42 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಈಶಾನ್ಯ ಭಾರತ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಕರಾವಳಿ ಆಂಧ್ರ ಪ್ರದೇಶ ಮತ್ತು ಕೇರಳದ ಹಲವು ಭಾಗಗಳಲ್ಲಿ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಯಾವುದೇ ಸ್ಥಳದಲ್ಲಿ ಗರಿಷ್ಠ ತಾಪಮಾನವು ಬಯಲು ಪ್ರದೇಶಗಳಲ್ಲಿ ಕನಿಷ್ಠ 40 °C, ಕರಾವಳಿ ಪ್ರದೇಶಗಳಲ್ಲಿ ಕನಿಷ್ಠ 37 °C ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಕನಿಷ್ಠ 30 °C.ವರೆಗೆ ಅಥವಾ ಕನಿಷ್ಠ 4.5 ಡಿಗ್ರಿಗಳಿಗೆ ಏರಿದಾಗ ಉಷ್ಣ ಹವೆ ಸ್ಥಿತಿಯನ್ನು ಘೋಷಿಸಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com