ನವದೆಹಲಿ: ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ನ್ಯಾಯಾಂಗದ ವಿರುದ್ಧ ಟೀಕೆ ಮಾಡಿದ್ದ ಐಪಿಎಲ್ ಮಾಜಿ ಆಯುಕ್ತ ಲಲಿತ್ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಈ ಸಂಬಂಧ ಬೇಷರತ್ ಕ್ಷಮೆಯಾಚಿಸುವಂತೆ ಗುರುವಾರ ಸೂಚಿಸಿದೆ.
ಲಲಿತ್ ಮೋದಿ ಕಾನೂನು ಮತ್ತು ಸುಪ್ರೀಂ ಕೋರ್ಟ್ ಗಿಂತ ದೊಡ್ಡವರಲ್ಲ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಷಾ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ಪೀಠ, ಲಲಿತ್ ಮೋದಿ ಸಲ್ಲಿಸಿರುವ ಕೌಂಟರ್ ಅಫಿಡವಿಟ್ ತೃಪ್ತಿಕರವಾಗಿಲ್ಲ ಎಂದು ಹೇಳಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಪ್ರಮುಖ ರಾಷ್ಟ್ರೀಯ ಪತ್ರಿಕೆಗಳಲ್ಲಿ ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ ಮಾಜಿ ಐಪಿಎಲ್ ಆಯುಕ್ತರಿಗೆ ಸೂಚಿಸಿದೆ. ಅಲ್ಲದೆ ಕ್ಷಮೆಯಾಚಿಸುವ ಮೊದಲು ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಲಲಿತ್ ಮೋದಿ ನಿರ್ದೇಶನ ನೀಡಿದೆ ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಪೋಸ್ಟ್‌ಗಳನ್ನು ಮಾಡಬಾರದು ಎಂದು ಎಚ್ಚರಿಕೆ ನೀಡಿದೆ.
Advertisement