71 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ: ರೋಜ್‌ಗಾರ್ ಮೇಳ ಕುರಿತು ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 71,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ಕಡಿಮೆ ಪ್ರಮಾಣದ
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 71,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ಕಡಿಮೆ ಪ್ರಮಾಣದ ನೇಮಕಾತಿ ಹಾಗೂ ತುಂಬ ತಡವಾಯಿತು ಎಂದು ವ್ಯಂಗ್ಯವಾಡಿದ್ದಾರೆ. 

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 71 ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ನೌಕರಿ ಪಡೆದಿದ್ದು ಅವರೆಲ್ಲರಿಗೂ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದರು. ಎನ್‌ಡಿಎ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗ ನೀಡುವ ಪ್ರಕ್ರಿಯೆ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ನಿನ್ನೆಯಷ್ಟೇ ಮಧ್ಯಪ್ರದೇಶದಲ್ಲಿ 22,000ಕ್ಕೂ ಹೆಚ್ಚು ಶಿಕ್ಷಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿದೆ ಎಂದರು. 

'ಉದ್ಯೋಗ ಮೇಳ'ದಡಿ ಇತ್ತೀಚಿಗೆ ನೇಮಕಾತಿ ಪತ್ರ ವಿತರಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ವ್ಯಂಗ್ಯವಾಡಿದ್ದು, 'ತುಂಬಾ ಕಡಿಮೆ, ತಡವಾಗಿ' ಇದು ಕೇವಲ 'ಸ್ಟಂಟ್' ಎಂದು ಹೇಳಿದರು.

ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡಿರುವ ಖರ್ಗೆ, 'ಮೋದಿ ಜೀ, ಉದ್ಯೋಗದ ಹೆಸರಿನಲ್ಲಿ ಮತ್ತೆ 'ನೇಮಕಾತಿ ಪತ್ರ' ಹಂಚುತ್ತಿದ್ದಾರೆ. ಈ ಸಂದರ್ಭದಲ್ಲಿ ರೈಲ್ವೇ ಸಚಿವಾಲಯದಿಂದ ಬರೋಬ್ಬರಿ 50,000 ಪತ್ರಗಳು ಬಂದಿವೆ. ರೈಲ್ವೆಯಲ್ಲಿ 3,01,750 ಹುದ್ದೆಗಳು ಖಾಲಿ ಇವೆ. ಸರ್ಕಾರಿ ಸಚಿವಾಲಯಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಹೀಗಾಗಿ ಇದು 'ತುಂಬಾ ಕಡಿಮೆ, ತುಂಬಾ ತಡವಾಗಿದೆ' ಎಂದು ಟ್ವೀಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com