ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 11,109 ಸೋಂಕು ಪತ್ತೆ

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,109 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,109 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,97,269ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,064ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 49,622ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,16,583ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ  2,21,725 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,37.19,207 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,25,120 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com