ಜನವರಿ 2024 ರಿಂದ ಕನ್ನಡ, ತಮಿಳು, ತೆಲುಗು ಸೇರಿ 13 ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪರೀಕ್ಷೆ!

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಶನಿವಾರದಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಸ್ಥಳೀಯ ಭಾಷೆಯಲ್ಲೇ CAPF ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪರೀಕ್ಷೆ
ಸ್ಥಳೀಯ ಭಾಷೆಯಲ್ಲೇ CAPF ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪರೀಕ್ಷೆ
Updated on

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಶನಿವಾರದಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಕನ್ನಡ, ತಮಿಳು, ತೆಲುಗು ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ಜನವರಿ 1, 2024 ರಿಂದ ನಡೆಸಲಾಗುವುದು ಎಂದು MHA ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲೂ ಹೊಂದಿಸಲ್ಪಡುತ್ತದೆ. ಈ ನಿರ್ಧಾರವು ಲಕ್ಷಾಂತರ ಆಕಾಂಕ್ಷಿಗಳು ತಮ್ಮ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತದೆ ಮತ್ತು ಅವರ ಆಯ್ಕೆಯ ಭವಿಷ್ಯವನ್ನು ಸುಧಾರಿಸುತ್ತದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಸಿಎಪಿಎಫ್‌ನಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಕಾನ್ಸ್‌ಟೇಬಲ್ ಜಿಡಿ ಒಂದಾಗಿದ್ದು, ಇದು ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳನ್ನು ಆಕರ್ಷಿಸುತ್ತದೆ ಎಂದು ಹೇಳಲಾಗಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಸ್ಥಳೀಯ ಯುವಕರು ತಮ್ಮ ಮಾತೃಭಾಷೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳುವ ಈ ಅವಕಾಶವನ್ನು ಬಳಸಿಕೊಳ್ಳಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ವ್ಯಾಪಕ ಪ್ರಚಾರವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು MHA ಹೇಳಿದೆ.

"ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗೃಹ ಸಚಿವಾಲಯ ಮತ್ತು ಗೃಹ ಸಚಿವರು ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ಭಾಷೆಗಳ ಬಳಕೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಸಂಪೂರ್ಣವಾಗಿ ಬದ್ಧವಾಗಿದೆ" ಎಂದು MHA ಹೇಳಿಕೆಯಲ್ಲಿ ಸೇರಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com