ಮತಾಂತರಕ್ಕೆ ಒತ್ತಾಯ: ಯುವತಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಯುವಕ ಶಾರೂಖ್ ಬಂಧನ!

ಹರ್ಬನ್‌ಶ್‌ಮೊಹಲ್ ಪ್ರದೇಶದಲ್ಲಿ ಯುವತಿಗೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾನ್ಪುರ(ಉತ್ತರಪ್ರದೇಶ): ಹರ್ಬನ್‌ಶ್‌ಮೊಹಲ್ ಪ್ರದೇಶದಲ್ಲಿ ಯುವತಿಗೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯುವತಿ ಮತಾಂತರ ಹಾಗೂ ಮದುವೆಯಾಗಲು ನಿರಾಕರಿಸಿದ್ದಳು. ಹೀಗಾಗಿ ಆರೋಪಿ ಆಕೆಯ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದನ್ನು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತ ಯುವತಿ ಆರೋಪಿ 24 ವರ್ಷದ ಶಾರುಖ್ ನೊಂದಿಗೆ ಸಂಬಂಧ ಹೊಂದಿದ್ದಳು. ಒಂದೋ ಮತಾಂತರ ಆಗಿ ಮದುವೆಯಾಗು, ಇಲ್ಲವಾದಲ್ಲಿ ಆಕೆಯ ಮಾನಹಾನಿ ಮಾಡುವುದಾಗಿ  ಶಾರುಖ್ ಹೇಳಿದ್ದು, ಈ ಅವಮಾನದಿಂದ ತಪ್ಪಿಸಿಕೊಳ್ಳಲು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. 

ಮನನೊಂದ ಯುವತಿ ಕಳೆದ ಬುಧವಾರ ತನ್ನ ಮನೆಯ ಸೀಲಿಂಗ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ಸಹಾಯಕ ಪೊಲೀಸ್ ಆಯುಕ್ತ(ಕಲೇಕ್ಟರ್ ಆರ್ಗಂಜ್) ತೇಜ್ ಬಹದ್ದೂರ್ ಸಿಂಗ್ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಆರೋಪಿಯೊಂದಿಗೆ ಯುವತಿ ಸಂಪರ್ಕಕ್ಕೆ ಬಂದಿದ್ದಳು. ಅಂದು ಆರೋಪಿ ತನ್ನನ್ನು ಸೌರಭ್ ಎಂದು ಪರಿಚಯಿಸಿಕೊಂಡಿದ್ದ ಎಂದು ಎಸಿಪಿ ತಿಳಿಸಿದ್ದಾರೆ.

ಮೃತಳ ತಂದೆ ಶಾರುಖ್ ತನ್ನ ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದು ಇಸ್ಲಾಂ ಧರ್ಮದ ಪ್ರಕಾರ ಮದುವೆಯಾಗುವಂತೆ ಒತ್ತಾಯಿಸಿದ್ದನು ಎಂದು ಆರೋಪಿಸಿದ್ದಾರೆ. ಶಾರುಖ್ ತನ್ನ ಮಗಳ ಆಕ್ಷೇಪಾರ್ಹ ಫೋಟೋಗಳು ಮತ್ತು ವೀಡಿಯೊಗಳನ್ನು ಹೊಂದಿದ್ದು, ಅದರ ಮೂಲಕ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದ ಎಂದು ತಂದೆ ಹೇಳಿಕೊಂಡಿದ್ದಾರೆ.

ಭಾರತೀಯ ದಂಡ ಸಂಹಿತೆ- 306(ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಉತ್ತರ ಪ್ರದೇಶ ಅಕ್ರಮ ಮತಾಂತರ ನಿಷೇಧ ಕಾಯ್ದೆ-2021ರ ಸೆಕ್ಷನ್‌ಗಳ ಅಡಿಯಲ್ಲಿ ಶಾರುಖ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಈ ವಿಷಯದಲ್ಲಿ ತ್ವರಿತವಾಗಿ ತನಿಖೆಗಿಳಿದ ಪೊಲೀಸರು ತಲೆ ಮರೆಸಿಕೊಂಡಿದ್ದ ಶಾರುಖ್ ನನ್ನು ಹರ್ಬನ್ಶ್-ಮೊಹಾಲ್‌ನ ಭೂಸತೋಲಿಯಿಂದ ಬಂಧಿಸಿದ್ದಾರೆ ಎಂದು ಹೇಳಿದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಎಸಿಪಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com