ಅತೀಕ್ ಅಹ್ಮದ್ ಹತ್ಯೆ; ರಾಜಕೀಯ ಉದ್ದೇಶಕ್ಕಾಗಿ ಕಾನೂನಿನ ಜೊತೆ ಆಟವಾಡುವುದು ಸರಿಯಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಆದರೆ, ಅದು ದೇಶದ ಕಾನೂನಿನ ಪ್ರಕಾರವಾಗಿರಬೇಕು ಮತ್ತು ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ. 
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ನವದೆಹಲಿ: ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಆದರೆ, ಅದು ದೇಶದ ಕಾನೂನಿನ ಪ್ರಕಾರವಾಗಿರಬೇಕು ಮತ್ತು ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ದಿನದ ನಂತರ ಈ ಹೇಳಿಕೆ ನೀಡಿದ್ದಾರೆ.

ಅತೀಕ್ ಅಹ್ಮದ್ (60) ಮತ್ತು ಅವರ ಸಹೋದರ ಅಶ್ರಫ್ ಅವರನ್ನು ತಪಾಸಣೆಗಾಗಿ ಪ್ರಯಾಗ್‌ರಾಜ್‌ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಪೊಲೀಸರು ಕರೆದೊಯ್ಯುತ್ತಿದ್ದಾಗ ಶನಿವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಲೆ ಪತ್ರಕರ್ತರಂತೆ ಬಂದಿದ್ದ ಆರೋಪಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, 'ದೇಶದ ಕಾನೂನನ್ನು ಸಂವಿಧಾನದಲ್ಲಿ ಬರೆಯಲಾಗಿದೆ ಮತ್ತು ಈ ಕಾನೂನು ಅತ್ಯುನ್ನತವಾಗಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಆದರೆ, ಅದು ದೇಶದ ಕಾನೂನಿನ ಪ್ರಕಾರ ಇರಬೇಕು. ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಯೊಂದಿಗೆ ಆಟವಾಡುವುದು ಅಥವಾ ಉಲ್ಲಂಘಿಸುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದ್ದಾರೆ.

'ಯಾರೇ ಈ ಕೃತ್ಯ ಎಸಗಿದ್ದರೂ ಅಥವಾ ಇಂತಹ ಕೃತ್ಯದಲ್ಲಿ ತೊಡಗಿರುವವರಿಗೆ ರಕ್ಷಣೆ ನೀಡಿದರೆ ಅವರನ್ನೂ ಹೊಣೆಗಾರರನ್ನಾಗಿ ಮಾಡಬೇಕು ಮತ್ತು ಆ ವ್ಯಕ್ತಿಯ ಮೇಲೆ ಕಟ್ಟುನಿಟ್ಟಾಗಿ ಕಾನೂನು ಜಾರಿಗೊಳಿಸಬೇಕು.ದೇಶದಲ್ಲಿ ನ್ಯಾಯ ವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಅತ್ಯುನ್ನತವಾಗಿರಬೇಕು ಎಂಬುದು ನಮ್ಮೆಲ್ಲರ ಪ್ರಯತ್ನವಾಗಬೇಕು' ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಜೈಲಿನಲ್ಲಿದ್ದ ಅತೀಕ್ ಅಹ್ಮದ್ ಮತ್ತು ಅಶ್ರಫ್ ಇಬ್ಬರನ್ನೂ ರಾತ್ರಿ 10 ಗಂಟೆಯ ಸುಮಾರಿಗೆ ಕೊಲ್ಲಲ್ಪಟ್ಟಾಗ ಅವರಿಗೆ ಕೈಕೋಳ ತೊಡಿಸಲಾಗಿತ್ತು. 

ಭಯಾನಕ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ದೂರದರ್ಶನ ಚಾನೆಲ್‌ಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com