ಗ್ಯಾಂಗ್ ಸ್ಟರ್ ಅತೀಕ್ ಗೆ 9 ಬಾರಿ ಗುಂಡು ಹಾರಿಸಿ ಹತ್ಯೆ: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಅವರಿಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.  
ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಅಶ್ರಫ್
ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಅಶ್ರಫ್
Updated on

ಲಖನೌ: ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಅವರಿಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.  

ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದರು. ಆ ಭಯಾನಕ ಹತ್ಯೆಯ ದೃಶ್ಯಾವಳಿಗಳು ಆಸ್ಪತ್ರೆಯ ಹೊರಗಡೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ದರೋಡೆಕೋರನ ದೇಹದಲ್ಲಿ ಒಂಬತ್ತು ಗುಂಡೇಟುಗಳು ಕಂಡುಬಂದಿವೆ. ಅವರ ಸಹೋದರ ಅಶ್ರಫ್ ಅಹ್ಮದ್ ಅವರ ದೇಹದಿಂದ ಐದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಅತೀಕ್ ಅಹ್ಮದ್ ತಲೆಗೆ ಒಂದು ಬಾರಿ ಮತ್ತು ಎದೆ ಮತ್ತು ಬೆನ್ನಿನ ಮೇಲೆ ಎಂಟು ಬಾರಿ ಗುಂಡು ಹಾರಿಸಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಶ್ರಫ್ ಅವರ ಮುಖದ ಮೇಲೆ ಒಂದು, ಬೆನ್ನಿನ ಮೇಲೆ ನಾಲ್ಕು ಗುಂಡೇಟುಗಳು ಕಂಡುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com