'ನಾವು ಒಗ್ಗಟ್ಟಾಗಿದ್ದೇವೆ': ಉದ್ಧವ್ ಠಾಕ್ರೆ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ ಮತ್ತು ಈ ಸರ್ವಾಧಿಕಾರದ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ...
ಉದ್ಧವ್ ಠಾಕ್ರೆ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು
ಉದ್ಧವ್ ಠಾಕ್ರೆ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ ಮತ್ತು ಈ ಸರ್ವಾಧಿಕಾರದ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಸಂಜೆ ವಾಣಿಜ್ಯ ನಗರಿಗೆ ಆಗಮಿಸಿದ ವೇಣುಗೋಪಾಲ್ ಅವರು, ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ನಂತರ ಉಭಯ ನಾಯಕರು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

"ಮೋದಿ ಮತ್ತು ಅಮಿತ್ ಶಾ ಅವರು ಪ್ರಜಾಪ್ರಭುತ್ವವನ್ನು ಹೇಗೆ ಹಾಳುಮಾಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಎಲ್ಲಾ ವಿರೋಧ ಪಕ್ಷಗಳು ಮೋದಿಯ ಸರ್ವಾಧಿಕಾರದ ವಿರುದ್ಧ ಒಟ್ಟಾಗಿ ಹೋರಾಡಲು ಬದ್ಧವಾಗಿವೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ(ಯುಬಿಟಿ) ಯೊಂದಿಗೆ ಕಾಂಗ್ರೆಸ್ ಸಂಪೂರ್ಣ ಒಗ್ಗಟ್ಟಾಗಿದೆ. ನಾವು ಈ ಶಕ್ತಿ(ಬಿಜೆಪಿ)ಗಳ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ನಿರ್ಧರಿಸಿದ್ದೇವೆ” ಎಂದು ವೇಣುಗೋಪಾಲ್ ಹೇಳಿದರು.

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ(ಇಡಿ) ವಿರೋಧ ಪಕ್ಷಗಳನ್ನು ವಿಶೇಷವಾಗಿ ಶಿವಸೇನೆ(ಯುಬಿಟಿ)ಯನ್ನು ಟಾರ್ಗೆಟ್ ಮಾಡುತ್ತಿವೆ ಎಂದು ವೇಣುಗೋಪಾಲ್ ಆರೋಪಿಸಿದರು.

ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ದೆಹಲಿಗೆ ಬರುವಂತೆ ನಾನು ಉದ್ಧವ್‌ ಠಾಕ್ರೆ ಅವರಿಗೆ ಮನವಿ ಮಾಡಿದ್ದೇನೆ. ನಂತರ ರಾಹುಲ್ ಗಾಂಧಿ ಕೂಡ ಮುಂಬೈಗೆ ಖಂಡಿತವಾಗಿಯೂ ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ವೇಣುಗೋಪಾಲ್ ಉತ್ತರಿಸಿದರು.

ಬಳಿಕ ಮಾತನಾಡಿದ ಉದ್ಧವ್ ಠಾಕ್ರೆ ಅವರು, ನೇರವಾಗಿ ಪ್ರಧಾನಿ ಮೋದಿಯ ಹೆಸರು ಪ್ರಸ್ತಾಪಿಸದೆ, ಕೇಂದ್ರದ ಪ್ರಸ್ತುತ ಸರ್ಕಾರ "ನರಭಕ್ಷಕ" ಮತ್ತು "ಅಧಿಕಾರ ದಾಹಿ" ಎಂದು ವಾಗ್ದಾಳಿ ನಡೆಸಿದರು.

"ಅವರ(ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ವಿರುದ್ಧಅಂತಹ ಪರಿಭಾಷೆಯನ್ನು ಬಳಸುವುದು ತಪ್ಪಲ್ಲ ಎಂದು ನಾನು ಭಾವಿಸುತ್ತೇನೆ. ಅಲ್ಲಿ ಒಬ್ಬ ವ್ಯಕ್ತಿಯನ್ನು ಮಾತ್ರ ಮುಖ್ಯವೆಂದು ಪರಿಗಣಿಸಲಾಗಿದೆ. ಅವರ ವಿರುದ್ಧ ಶಿವಸೇನೆ ತನ್ನ ಎಲ್ಲಾ ಶಕ್ತಿಯನ್ನು ಮೀರಿ ಹೋರಾಡುತ್ತಿದೆ" ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com