ದೆಹಲಿ: ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಹತ್ಯೆ ಮಾಡಿದ ಬಾಲಕನ ಬಂಧನ

16 ವರ್ಷದ ಬಾಲಕನೊಬ್ಬ ತನಗೆ ಲೈಂಗಿಕ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಸುಮಾರು 40 ವರ್ಷದ ವ್ಯಕ್ತಿಯನ್ನು ಹತ್ಯೆಗೈದಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: 16 ವರ್ಷದ ಬಾಲಕನೊಬ್ಬ ತನಗೆ ಲೈಂಗಿಕ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಸುಮಾರು 40 ವರ್ಷದ ವ್ಯಕ್ತಿಯನ್ನು ಹತ್ಯೆಗೈದಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಆರೋಪಿ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿ, ವೀಕ್ಷಣಾ ಗೃಹಕ್ಕೆ ಕಳುಹಿಸಿದ್ದಾರೆ.

ಕಳೆದ ಏಪ್ರಿಲ್ 15 ರಂದು ಕೆಂಪು ಕೋಟೆಯ ಹಿಂಭಾಗದ ಫುಟ್‌ಪಾತ್‌ನಲ್ಲಿ ಶವ ಬಿದ್ದಿರುವ ಬಗ್ಗೆ ಕೊತ್ವಾಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. 

ಜಿಲ್ಲಾ ಸಂಚಾರಿ ಅಪರಾಧ ತಂಡ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್) ತಜ್ಞರು ಅಪರಾಧ ನಡೆದ ಸ್ಥಳವನ್ನು ಪರಿಶೀಲಿಸಿದರು ಮತ್ತು ಸ್ಥಳದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸಿದರು ಎಂದು ಉಪ ಪೊಲೀಸ್ ಆಯುಕ್ತ(ಉತ್ತರ) ಎಸ್‌ಎಸ್ ಕಲ್ಸಿ ಅವರು ಹೇಳಿದ್ದಾರೆ.

ಒಬ್ಬ ಪ್ರತ್ಯಕ್ಷದರ್ಶಿ, ಶಾಜಿದ್ ಖಾನ್(ಮೃತನ ಸ್ನೇಹಿತ), ಅವರನ್ನು ಶಂಭು ಎಂದು ಗುರುತಿಸಿದ್ದು, ಅವರು ಸುಮಾರು 40-45 ವರ್ಷ ವಯಸ್ಸಿನವರಾಗಿದ್ದು, ಪ್ರತ್ಯಕ್ಷದರ್ಶಿ ಹೇಳಿಕೆ ಆಧರಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.

ತನಿಖೆಯ ಸಮಯದಲ್ಲಿ, ಪೊಲೀಸರು ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಿದ ನಂತರ ಆರೋಪಿಯನ್ನು ಪತ್ತೆಹಚ್ಚಿದರು. ಆರೋಪಿ 16 ವರ್ಷದ ಬಾಲಕ ಎಂದು ತಿಳಿದುಬಂದಿರುವುದಾಗಿ ಅವರು ಹೇಳಿದ್ದಾರೆ.

ವಿಚಾರಣೆ ನಡೆಸಿದಾಗ, ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಎರಡು ವರ್ಷಗಳ ಹಿಂದೆ ತನ್ನ ಮನೆ ತೊರೆದು ಮುಂಬೈಗೆ ತೆರಳಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಹಳೆ ದೆಹಲಿ ರೈಲು ನಿಲ್ದಾಣದಲ್ಲಿ ಶಂಭು ಪರಿಚಯವಾಗಿದ್ದು, ಆತನೊಂದಿಗೆ ವಾಸಿಸುತ್ತಿದ್ದನು ಎಂದು ಕಲ್ಸಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಶಂಭು, ಈ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ. ಏಪ್ರಿಲ್ 14 ರಂದು ಮತ್ತೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಾಲಕ ಆತನ ತಲೆಗೆ ಕೋಲಿನಿಂದ ಹೊಡೆದಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com