ರಾಜಕೀಯ ಮಾಡಬೇಡಿ: ಸುಡಾನ್‌ನಲ್ಲಿ ಸಿಲುಕಿದ ಕನ್ನಡಿಗರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿದ್ದರಾಮಯ್ಯಗೆ ಜೈಶಂಕರ್ ತಿರುಗೇಟು

ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು, ಈ ವಿಚಾರದಲ್ಲಿ ರಾಜಕೀಯ...
ಜೈಶಂಕರ್ - ಸಿದ್ದರಾಮಯ್ಯ
ಜೈಶಂಕರ್ - ಸಿದ್ದರಾಮಯ್ಯ

ನವದೆಹಲಿ: ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು, ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

"ಸುಡಾನ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕರ್ನಾಟಕ ಹಕ್ಕಿ ಪಿಕ್ಕಿ ಬುಡಕಟ್ಟು ಸಮುದಾಯದ 31 ಮಂದಿ ಆಹಾರವಿಲ್ಲದೆ ಪರದಾಡುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ಕೇಂದ್ರ ಸರ್ಕಾರ ಅವರನ್ನು ಮರಳಿ ಕರೆತರಲು ಇನ್ನೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರ್ಕಾರ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಬೇಕು" ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, "ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ದಿಗಿಲುಗೊಂಡೆ. ಅಲ್ಲಿ ಜೀವಗಳು ಅಪಾಯದಲ್ಲಿದೆ. ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಏಪ್ರಿಲ್ 14 ರಂದು ಸಂಘರ್ಷ ಪ್ರಾರಂಭವಾದಾಗಿನಿಂದ, ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಮತ್ತು ಪಿಐಒಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಭದ್ರತಾ ಕಾರಣಗಳಿಗಾಗಿ ಸುಡಾನ್‌ನಲ್ಲಿರುವ ಭಾರತೀಯರ ವಿವರಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com