ರಾಜಕೀಯ ನಾಯಕರ ಹಿಂಬಾಲಕರಿಂದ ಕಿರುಕುಳ: ಕಣ್ಣೀರಿಟ್ಟ ರಾಜಸ್ಥಾನದ ಟ್ರಾಫಿಕ್ ಪೋಲೀಸ್, ವಿಡಿಯೋ ವೈರಲ್!

ಜೈಪುರ: ಚುರು ಜಿಲ್ಲೆಯಲ್ಲಿ ಸಂಚಾರಿ ದಟ್ಟಣೆಯನ್ನು ನಿಯಂತ್ರಿಸುವಾಗ ಕೆಲ ರಾಜಕೀಯ ನಾಯಕರ ಹಿಂಬಾಲಕರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಕಣ್ಣೀರಿಟ್ಟ ಟ್ರಾಫಿಕ್ ಕಾನ್‌ಸ್ಟೆಬಲ್ ವೈರಲ್ ವೀಡಿಯೊವನ್ನು ಆಧರಿಸಿ ರಾಜಸ್ಥಾನ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಡ್ ಕಾನ್‌ಸ್ಟೆಬಲ್‌ನೊಂದಿಗೆ ಮಾತನಾಡುತ್ತಿರುವ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ರಾಜಕೀಯ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ತನಗೆ ಕಿರುಕುಳ ನೀಡಿದ್ದಾರೆ. ಅಲ್ಲದೆ ರಾಜಕೀಯ ಮುಖಂಡನ ಮನೆಗೆ ಬರುವಂತೆ ಸೂಚಿಸಿದರು ಎಂದು ಟ್ರಾಫಿಕ್ ಹೆಡ್ ಕಾನ್ ಸ್ಟೆಬಲ್ ಹೇಳಿಕೊಂಡಿದ್ದಾರೆ. ಆದರೆ ಅವರು ಯಾರು ಎಂದು ಪೇದೆ ಹೆಸರು ಹೇಳಿಲ್ಲ.
ಈ ವಿಡಿಯೋ ಸಂಬಂಧ ಬಿಕಾನೇರ್ ವ್ಯಾಪ್ತಿಯ ಐಜಿ ಓಂ ಪ್ರಕಾಶ್ ಅವರು ಚುರು ಎಸ್ಪಿ ರಾಜೇಶ್ ಕುಮಾರ್ ಮೀನಾ ಅವರಿಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಇನ್ನು ಘಟನೆ ಬಗ್ಗೆ ಚುರು ವೃತ್ತದ ಅಧಿಕಾರಿ ರಾಜೇಂದ್ರ ಬುರ್ಡಾಕ್ ವಿವರಿಸಿದ್ದು, ಕಾನ್‌ಸ್ಟೆಬಲ್ ಸಂಚಾರಿ ದಟ್ಟಣೆಯನ್ನು ನಿಯಂತ್ರಿಸುತ್ತಿರುವಾಗ ಕೆಲವರು ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಿದರು.
ಏತನ್ಮಧ್ಯೆ, ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಾಸ್ರಾ ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಅವರು ಚುರುದಲ್ಲಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


