ಅತೀಕ್ ಸಹೋದರರ ಶೂಟೌಟ್: ಹಂತಕರು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಮೊಹಮ್ಮದ್‌ ಅಶ್ರಫ್‌ ಅವರನ್ನು ಗುಂಡಿಕ್ಕಿ ಹತ್ಯೆಗೈದ ಮೂವರು ಆರೋಪಿಗಳನ್ನು ಚೀಫ್ ಜುಡೀಷಿಯಲ್ ಮ್ಯಾಜಿಸ್ಟ್ರೇಟ್‌ ಕೋರ್ಟ್ ಬುಧವಾರ ನಾಲ್ಕು ದಿನಗಳ...
ಅತೀಕ್  ಹಂತಕರು
ಅತೀಕ್ ಹಂತಕರು

ಪ್ರಯಾಗ್‌: ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಮೊಹಮ್ಮದ್‌ ಅಶ್ರಫ್‌ ಅವರನ್ನು ಗುಂಡಿಕ್ಕಿ ಹತ್ಯೆಗೈದ ಮೂವರು ಆರೋಪಿಗಳನ್ನು ಚೀಫ್ ಜುಡೀಷಿಯಲ್ ಮ್ಯಾಜಿಸ್ಟ್ರೇಟ್‌ ಕೋರ್ಟ್ ಬುಧವಾರ ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿಗಳಾದ ಲವ್ಲೇಶ್ ತಿವಾರಿ, ಮೋಹಿತ್ ಮತ್ತು ಅರುಣ್ ಕುಮಾರ್ ಮೌರ್ಯ ಅವರನ್ನು ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಏಳು ದಿನ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ನಾಲ್ಕು ದಿನಗಳ ಕಾಲ, ಏಪ್ರಿಲ್ 23ರ ಸಂಜೆ 5 ಗಂಟೆಯವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ ಎಂದು ಜಿಲ್ಲಾ ಸರ್ಕಾರಿ ವಕೀಲ ಗುಲಾಬ್ ಚಂದ್ರ ಅಗ್ರಹರಿ ಅವರು ಹೇಳಿದ್ದಾರೆ.

ಪೊಲೀಸರು ಕಳೆದ ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗಾಗಿ ಅತೀಕ್ ಹಾಗೂ ಅಶ್ರಫ್ ನನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ಯುತ್ತಿದ್ದಾಗ ಈ ಮೂವರು ಆರೋಪಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com