ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಸೇನಾ ಟ್ರಕ್
ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಸೇನಾ ಟ್ರಕ್

ಜಮ್ಮು-ಕಾಶ್ಮೀರ: ಸೇನಾ ವಾಹನದಲ್ಲಿ ಬೆಂಕಿ, ಐವರು ಸೈನಿಕರು ಸಜೀವ ದಹನ- ವಿಡಿಯೋ

ಸಂಚರಿಸುತ್ತಿದ್ದ ಸೇನಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸೈನಿಕರು ಸಜೀವ ದಹನವಾಗಿರುವ ದಾರುಣ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
Published on

ಜಮ್ಮು-ಕಾಶ್ಮೀರ: ಸಂಚರಿಸುತ್ತಿದ್ದ ಸೇನಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸೈನಿಕರು ಸಜೀವ ದಹನವಾಗಿರುವ ದಾರುಣ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಭಿಂಬರ್ ಗಲಿ ಟು ಸಾಂಗಿಯೋಟ್ ಕಡೆಗೆ ಸಂಚರಿಸುತ್ತಿದ್ದ ಸೇನಾ ವಾಹನಕ್ಕೆ ಇಂದು ಮಧ್ಯಾಹ್ನ ಮೂರು ಗಂಟೆ ಸುಮಾರಿನಲ್ಲಿ ಬೆಂಕಿ ತಗುಲಿದ್ದು, ಟ್ರಕ್ ನಲ್ಲಿದ್ದ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ರಕ್ಷಣಾ  ಇಲಾಖೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಬಾಂಬ್ ಅಥವಾ ಸಂಚಿನ ದಾಳಿಯಿಂದ ಬೆಂಕಿ ತಗುಲಿರಬಹುದು ಎಂದು ಕೆಲವು ವರದಿಗಳು ಹೇಳುತ್ತಿವೆ. ಆದರೆ ಇಂತಹ ಹೇಳಿಕೆಗಳಿಗೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸುದ್ದಿ ತಿಳಿದ ತಕ್ಷಣ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.  ಬೆಂಕಿ ಹೊತ್ತಿಕೊಂಡಾಗ ಟ್ರಕ್ ನಲ್ಲಿ ಎಷ್ಟು ಸೈನಿಕರು ಇದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com