ಮಹಾ ಭೂಷಣ್ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ಝಳದಿಂದ 50 ರಿಂದ 75 ಮಂದಿ ಸಾವು: ರಾವತ್

ನವಿ ಮುಂಬೈನಲ್ಲಿ ಕಳೆದ ಭಾನುವಾರ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ 50 ರಿಂದ 75 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ.
ಸಂಜಯ್ ರಾವತ್
ಸಂಜಯ್ ರಾವತ್

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ಕಳೆದ ಭಾನುವಾರ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ 50 ರಿಂದ 75 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ.

ಶಿಂಧೆ ಸರ್ಕಾರ ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಗಢ ಜಿಲ್ಲೆಯ ಉರಾನ್, ಶ್ರೀವರ್ಧನ್, ರೋಹಾ ಮತ್ತು ಮಂಗಾವ್ ತಾಲೂಕುಗಳ ತಮ್ಮ ಪಕ್ಷದ ಕಾರ್ಯಕರ್ತರು ಖಾರ್ಘರ್ ಕಾರ್ಯಕ್ರಮದಲ್ಲಿ ಸತ್ತವರ ನಿಜವಾದ ಸಂಖ್ಯೆ ಅಧಿಕೃತ ಅಂಕಿಅಂಶಕ್ಕಿಂತ ದೊಡ್ಡದಾಗಿದೆ ಎಂದು ತಮಗೆ ತಿಳಿಸಿರುವುದಾಗಿ ಹೇಳಿದ್ದಾರೆ.

ಮುಂಬೈನ ಖಾರ್ಘರ್ ಪ್ರದೇಶದಲ್ಲಿ ಕಳೆದ ಭಾನುವಾರ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನಿಂದ 14 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಮುಖಂಡರು, ರಾವತ್ ಅವರು ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com