ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ)
ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ)

ಚಾರ್ ಧಾಮ್ ಯಾತ್ರಾರ್ಥಿಗಳ ದೈನಂದಿನ ಮಿತಿ ಹಿಂಪಡೆದ ಉತ್ತರಾಖಂಡ ಸಿಎಂ

ಚಾರ್ ಧಾಮ್ ಯಾತ್ರೆ ಆರಂಭವಾಗುವ ಮುನ್ನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಕ್ತರಿಗೆ ಸಿಹಿ ಸುದ್ದಿ ನೀಡಿದ್ದು, ಯಾತ್ರಾರ್ಥಿಗಳ ದೈನಂದಿನ ಮಿತಿಯನ್ನು ಹಿಂಪಡೆದಿದ್ದಾರ.

ಡೆಹ್ರಾಡೂನ್: ಚಾರ್ ಧಾಮ್ ಯಾತ್ರೆ ಆರಂಭವಾಗುವ ಮುನ್ನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಕ್ತರಿಗೆ ಸಿಹಿ ಸುದ್ದಿ ನೀಡಿದ್ದು, ಯಾತ್ರಾರ್ಥಿಗಳ ದೈನಂದಿನ ಮಿತಿಯನ್ನು ಹಿಂಪಡೆದಿದ್ದಾರ.

ಚಾರ್ ಧಾಮ್, ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳಿಗೆ ಭೇಟಿ ನೀಡಬಹುದಾದ ದೈನಂದಿನ ಭಕ್ತರ ಸಂಖ್ಯೆಯನ್ನು ಮಿತಿಗೊಳಿಸಲು ರಾಜ್ಯ ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಆದರೆ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅರ್ಚಕರು ಮತ್ತು ಪ್ರವಾಸ ಆಯೋಜಕರ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಧಾಮಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.

ದೇವಾಲಯಗಳಿಗೆ ಭೇಟಿ ನೀಡುವ ಯಾತ್ರಿಕರ ದೈನಂದಿನ ಸಂಖ್ಯೆಗೆ ಮಿತಿ ಹಾಕುವ ನಿರ್ಧಾರವನ್ನು ಹಿಂಪಡೆಯಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಆದೇಶ ಹೊರಡಿಸಿದ್ದಾರೆ.

ಆದಾಗ್ಯೂ, ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ನೋಂದಣಿ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ. ಏಕೆಂದರೆ ಇದು ಅವರನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com